ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.
Published: 02nd May 2021 04:07 PM | Last Updated: 02nd May 2021 04:07 PM | A+A A-

ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.
ಹೌದು, 8 ಸಾವಿರ ಮತಗಳಿಂದ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಇದೀಗ 6 ಮತಗಳಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ.
ಬಂಗಾಳದಲ್ಲಿ 294 ಕ್ಷೇತ್ರಗಳಿಗೆ 8 ಸುತ್ತಿಗಳಲ್ಲಿ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು ಟಿಎಂಸಿ ಬರೋಬ್ಬರಿ 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ತೀವ್ರ ಪ್ರಚಾರ ನಡೆಸಿದ್ದ ಬಿಜೆಪಿ ಕೇವಲ 80 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಂಗಾಳದಲ್ಲಿ ಸರಳ ಬಹುಮತಕ್ಕೆ 148 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು.