ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದ ಅಭ್ಯರ್ಥಿಯ ಏಜೆಂಟ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಯ ಏಜೆಂಟ್ ಒಬ್ಬರು ಮತ ಎಣಿಕೆ ಕೇಂದ್ರದಲ್ಲಿ ಕುಸಿದುಬಿದ್ದಿರುವ ಘಟನೆ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ವರದಿಯಾಗಿದೆ. 

Published: 02nd May 2021 10:53 AM  |   Last Updated: 02nd May 2021 10:53 AM   |  A+A-


West Bengal Election Result 2021: Congress counting agent Gopal Som faints in counting booth

ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದ ಅಭ್ಯರ್ಥಿಯ ಏಜೆಂಟ್

Posted By : Srinivas Rao BV
Source : Online Desk

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಯ ಏಜೆಂಟ್ ಒಬ್ಬರು ಮತ ಎಣಿಕೆ ಕೇಂದ್ರದಲ್ಲಿ ಕುಸಿದುಬಿದ್ದಿರುವ ಘಟನೆ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಪಣಿಹತಿ ಕಾಂಗ್ರೆಸ್ ಅಭ್ಯರ್ಥಿ ತಪಸ್ ಮಜುಮ್ದಾರ್ ಅವರ ಏಜೆಂಟ್ ಗೋಪಾಲ್ ಸೋಮ್ ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದಿದ್ದು ಆತಂಕ ಮೂಡಿಸಿತ್ತು. 

ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಪಶ್ಚಿಮ ಬಂಗಾಳದಲ್ಲಿ ಇತ್ತೀಚಿನ ವರದಿಯ ಪ್ರಕಾರ ಒಟ್ಟು 294 ಸ್ಥಾನಗಳ ಪೈಕಿ ಟಿಎಂಸಿ-150 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 123, ಕಾಂಗ್ರೆಸ್ 5, ಇತರರು 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp