ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
Published: 02nd May 2021 01:38 PM | Last Updated: 02nd May 2021 01:38 PM | A+A A-

ಮಮತಾ ಬ್ಯಾನರ್ಜಿ
ನಂದಿಗ್ರಾಮ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
6 ನೇ ಸುತ್ತಿನ ಮತ ಎಣಿಕೆವರೆಗೂ ಸುವೇಂದು ಅಧಿಕಾರಿ 7,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ನಂತರದ ಸುತ್ತುಗಳಲ್ಲಿ ಮಮತಾ ಬ್ಯಾನರ್ಜಿ ನಿಧಾನವಾಗಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಉಭಯ ಅಭ್ಯರ್ಥಿಗಳಿಗೂ ಪ್ರತಿಷ್ಠೆಯ ಕ್ಷೇತ್ರವಾಗಿರುವ ನಂದಿಗ್ರಾಮದಲ್ಲಿ ಆರಂಭಿಕ ಹಂತದಿಂದಲೂ ಸುವೇಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದರು.
ಇನ್ನು ಆರಂಭದಿಂದಲೂ ಟಿಎಂಸಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದ ಬಿಜೆಪಿಯ ಮುನ್ನಡೆ ಕ್ರಮೇಣ ಕ್ಷೀಣಿಸತೊಡಗಿದೆ. ಇತ್ತೀಚಿನ ವರದಿಯ ಪ್ರಕಾರ ಒಟ್ಟಾರೆ 294 ಕ್ಷೇತ್ರಗಳ ಪೈಕಿ ಟಿಎಂಸಿ 205 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 84, ಕಾಂಗ್ರೆಸ್ 1, ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.