ಕಳಪೆ ಸಾಧನೆ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ

ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷದ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ ನೀಡಿದ್ದಾರೆ. 
ಕಳಪೆ ಸಾಧನೆ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ
ಕಳಪೆ ಸಾಧನೆ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷದ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ ನೀಡಿದ್ದಾರೆ. 

ರಾಜ್ಯಸಭೆ ಸದಸ್ಯರಾಗಿರುವ ರಿಪುನ್ ಬೋರ, ಸ್ವತಃ ಗೋಹ್ಪುರ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ 29,294 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 
 
ಹಂಗಾಮಿ ಅಧ್ಯಕ್ಷರಾದ ಸೋನಿಯಾ ಗಾಂಧಿಗೆ ಬೋರ ಪತ್ರ  ಬರೆದಿದ್ದು, "ಪಕ್ಷದ ಹೀನಾಯ ಸೋಲಿಗೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೆನೆ" ಎಂದು ಹೇಳಿದ್ದಾರೆ. 

"ಅವಿರತ ಶ್ರಮದ ಹೊರತಾಗಿಯೂ ನಾವು ಬಿಜೆಪಿಯ ವಿಭಜನಕಾರಿ ಹಾಗೂ ಕೋಮುವಾದಿ ರಾಜಕಾರಣವನ್ನು ಎದುರಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಹೇಳಲು ಅತ್ಯಂತ ನೋವಾಗುತ್ತಿದೆ" ಎಂದು ರಿಪುನ್ ಬೋರಾ ಪತ್ರದಲ್ಲಿ ತಿಳಿಸಿದ್ದಾರೆ. "ನಾಲ್ಕು ವರ್ಷಗಳಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿ ಸಾಧ್ಯವಾದಷ್ಟೂ ಅತ್ಯುತ್ತಮವಾದುದ್ದನ್ನೇ ಮಾಡಿದ್ದೇನೆ" ಎಂದು ರಿಪುನ್ ಬೋರಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com