ಇದು ಸಾವೋ ಇಲ್ಲ ಕೊಲೆಯೋ: ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ 

ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದ ದುರ್ಘಟನೆ ಬಗ್ಗೆಯೇ ಎಲ್ಲರ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನೆ ಮಾಡಿದ್ದಾರೆ. ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳುವ ಮೊದಲು ಇಂತಹ ಎಷ್ಟು ಸಾವು ನೋವುಗಳನ್ನು ಕಾಣಬೇಕಿದೆ, ಮೃತಪಟ್ಟವರ ಕುಟುಂಬಗಳಿಗೆ ಸಂತಾಪಗಳು ಎಂದು ಹೇಳಿದ್ದಾರೆ.

ಇದು ಪ್ರಚಾರ ಪ್ರಿಯ ಸರ್ಕಾರ, ಜನರ ಜೀವದ ಮೇಲೆ ಕಾಳಜಿಯಿಲ್ಲ, ಮಂತ್ರಿಗಳು, ಅಧಿಕಾರಿಗಳು ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ, ಇದರಿಂದಾಗಿ ಆಸ್ಪತ್ರೆಗಳಿಗೆ ಸರಾಗವಾಗಿ ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ, ರಾಜ್ಯದಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆಯೇ, ಇಲ್ಲವೇ ಎಂದು ನನಗೆ ಸಂಶಯ ಬರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com