ಇಂದು ಅಥವಾ ನಾಳೆ ಪ್ರಮಾಣ ವಚನ ಸ್ವೀಕಾರ ದಿನಾಂಕ ಪ್ರಕಟ: ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್

ಈ ಬಾರಿಯ ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದಕ್ಕಾಗಿ ನಾನು ತಮಿಳು ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

Published: 03rd May 2021 08:24 AM  |   Last Updated: 03rd May 2021 12:36 PM   |  A+A-


DMK leader M K Stalin

ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್

Posted By : Sumana Upadhyaya
Source : ANI

ಚೆನ್ನೈ: ಈ ಬಾರಿಯ ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದಕ್ಕಾಗಿ ನಾನು ತಮಿಳು ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ನಿರ್ದಿಷ್ಟ ಭರವಸೆಗಳನ್ನು ಹಂತಹಂತವಾಗಿ ಈಡೇರಿಸುತ್ತೇವೆ ಎಂದು ಡಿಎಂಕೆ ನಾಯಕ ತಮಿಳು ನಾಡಿನ ಮುಂದಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

ನಿನ್ನೆ ಫಲಿತಾಂಶ ಹೊರಬಿದ್ದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ದಿನವನ್ನು ನಾಳೆ(ಅಂದರೆ ಇಂದು ಮೇ3ಕ್ಕೆ) ಅಥವಾ ನಾಡಿದ್ದು ಪ್ರಕಟಿಸುವುದಾಗಿ ತಿಳಿಸಿದರು.

ಚುನಾವಣೆಯಲ್ಲಿ ಗೆದ್ದ ನಮಗೆ ಅಭಿನಂದನೆ ಸಲ್ಲಿಸುತ್ತಿರುವ ಎಲ್ಲಾ ನಾಯಕರಿಗೆ ನಾನು ಧನ್ಯವಾದಗಳನ್ನು ಹೇಳುತ್ತೇನೆ. ರಾಜಕೀಯ ಹಿರಿಯ ನಾಯಕರ ಸಲಹೆ, ಸಹಕಾರವನ್ನು ಈ ಸಂದರ್ಭದಲ್ಲಿ ಕೋರುತ್ತೇನೆ. ನಾಳೆಯ ನಂತರ ಪಕ್ಷದ ನೂತನ ಶಾಸಕರ ಸಭೆ ಕರೆದು ಅಧ್ಯಕ್ಷರನ್ನು ಔಪಚಾರಿಕವಾಗಿ ಆರಿಸುತ್ತೇವೆ ಎಂದು ಹೇಳಿದರು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp