ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ: ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ವರದಿ ನೀಡುವಂತೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. 

Published: 03rd May 2021 10:50 PM  |   Last Updated: 03rd May 2021 10:50 PM   |  A+A-


political violence in West Bengal

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ವರದಿ ನೀಡುವಂತೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. 

ನಿನ್ನೆಯಷ್ಟೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ. ಇದರ ಬೆನ್ನಲ್ಲೇ ನಿನ್ನೆ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲುತೂರಾಟವಾಗಿತ್ತು. ಈ ಹಿಂಸಾಚಾರದಲ್ಲಿ ಹಲವರು ಕಾರ್ಯಕರ್ತರು  ಗಾಯಗೊಂಡಿದ್ದರು.

ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಕೇಂದ್ರ ಗೃಹ ಇಲಾಖೆ ಈ ಸಂಬಂಧ ವಿವರವಾದ ವರದಿ ಸಲ್ಲಿಸುವಂತೆ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಕುರಿತು ಗೃಹ ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದು, 'ಹೂಗ್ಲಿ ಜಿಲ್ಲೆಯ ಪಕ್ಷದ ಒಂದು ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಬಿಜೆಪಿ  ಆರೋಪಿಸಿದೆ ಮತ್ತು ಸುವೆಂದು ಅಧಿಕಾರಿಯನ್ನೂ ಒಳಗೊಂಡಂತೆ ಅದರ ಕೆಲವು ನಾಯಕರ ಮೇಲೆ ರಾಜ್ಯದ ಇತರ ಭಾಗಗಳಲ್ಲಿ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಹೇಳಿದೆ.

ಈ ಬಗ್ಗೆ ನಿನ್ನೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರನ್ನು ಶಾಂತಿ ಕಾಪಾಡಿಕೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ಪ್ರಚೋದನೆಗಳಿಗೆ ಬಲಿಯಾಗದಂತೆ ಕೇಳಿಕೊಂಡಿದ್ದರು.
 

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp