ಛತ್ತೀಸ್ ಘರ್ ನಲ್ಲೊಂದು ದುರಂತ: ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ಇಬ್ಬರು ಸಾವನ್ನಪ್ಪಿ ಇನ್ನೂ ಇಬ್ಬರು ಅನಾರೋಗ್ಯಕ್ಕೆ ಒಳಗಾಗಿರುವ ಘಟನೆ ಛತ್ತೀಸ್ ಘರ್ ರಾಯ್ಪುರ್ ಜಿಲ್ಲೆಯಲ್ಲಿ ನಡೆದಿದೆ.

Published: 03rd May 2021 02:28 PM  |   Last Updated: 03rd May 2021 03:24 PM   |  A+A-


ಹ್ಯಾಂಡ್ ಸ್ಯಾನಿಟೈಸರ್

Posted By : Raghavendra Adiga
Source : PTI

ರಾಯ್ಪುರ್: ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ಇಬ್ಬರು ಸಾವನ್ನಪ್ಪಿ ಇನ್ನೂ ಇಬ್ಬರು ಅನಾರೋಗ್ಯಕ್ಕೆ ಒಳಗಾಗಿರುವ ಘಟನೆ ಛತ್ತೀಸ್ ಘರ್ ರಾಯ್ಪುರ್ ಜಿಲ್ಲೆಯಲ್ಲಿ ನಡೆದಿದೆ.

ಗೋಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಮೀಪವಿರುವ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಇಲ್ಲಿ ವಿಧಿಸಲಾದ ನಿರ್ಬಂಧಗಳ ಹಿನ್ನೆಲೆ ಮದ್ಯ ಸಿಕ್ಕದ ಕಾರಣ ನಾಲ್ವರು ಸ್ಯಾನಿಟೈಸರ್ ಸೇವಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರೆಲ್ಲಾ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ವರನ್ನು ಡಾ ಬಿ ಆರ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.  

ಮೃತರನ್ನು ರಾಜು ಚುರಾ ಮತ್ತು ವಿಜಯ್ ಕುಮಾರ್ ಚೌಹಾಣ್ ಎಂದು ಗುರುತಿಸಲಾಗಿದ್ದು ಇಬ್ಬರೂ 40 ವರ್ಷ ಆಸುಪಾಸಿನವರೆಂದು ತಿಳಿದುಬಂದಿದೆ. ಇತರ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 
 

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp