ಬಂಗಾಳ ಹಿಂಸಾಚಾರ: ಮಹಿಳೆಯರ ಮೇಲಿನ ಹಲ್ಲೆ ಕುರಿತು ತನಿಖೆ ನಡೆಸುವಂತೆ ಡಿಜಿಪಿಗೆ ಎನ್‌ಸಿಡಬ್ಲ್ಯು ಸೂಚನೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದಿದ್ದು, ನಂದಿಗ್ರಾಮದಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊಗಳಿಗೆ ಸಂಬಂಧಿಸಿದಂತೆ...

Published: 04th May 2021 07:46 PM  |   Last Updated: 04th May 2021 07:46 PM   |  A+A-


Mamata Banerjee

ಮಮತಾ ಬ್ಯಾನರ್ಜಿ

Posted By : Lingaraj Badiger
Source : PTI

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದಿದ್ದು, ನಂದಿಗ್ರಾಮದಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊಗಳಿಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು) ಮಂಗಳವಾರ ತಿಳಿಸಿದೆ.

ಎನ್‌ಸಿಡಬ್ಲ್ಯು ಈ ಸಂಬಂಧ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕರಿಗೆ(ಡಿಜಿಪಿ) ಪತ್ರ ಬರೆದಿದ್ದು, ಹಿಂಸಾಚಾರ ನಡೆಸಿದ ಆರೋಪಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಲು ಕೋರಿದೆ ಮತ್ತು ನಿರ್ಧಿಷ್ಟ ಸಮಯದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದೆ.

"ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)ಕ್ಕೆ ಹಲವು ಟ್ವೀಟ್ ಗಳು ಬಂದಿದ್ದು, ಅದರಲ್ಲಿ ಕೆಲವು ಗೂಂಡಾಗಳು ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಹಿಳೆಯರನ್ನು ಹೊಡೆಯುವುದನ್ನು ಕಾಣಬಹುದು. ಆಯೋಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ರಾಜ್ಯದ ಮಹಿಳೆಯರ ಭದ್ರತೆ ಮತ್ತು ಪ್ರಶ್ನಿಸುತ್ತದೆ" ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಕೂಡಲೇ ಕ್ರಮಕೈಗೊಳ್ಳಬೇಕು ಮತ್ತು ಆರೋಪಿಗಳನ್ನು ಯಾವುದೇ ವಿಳಂಬವಿಲ್ಲದೆ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸೋಮವಾರ ವ್ಯಾಪಕ ಹಿಂಸಾಚಾರ ನಡೆದಿದ್ದು, ಘರ್ಷಣೆಗಳಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ಅಲ್ಲದೆ ಅಂಗಡಿಗಳನ್ನು ಲೂಟಿ ಮಾಡಲಾಗಿದೆ ಎಂದು ಕೇಸರಿ ಪಕ್ಷ ಆರೋಪಿಸಲಾಗಿದೆ. ಪ್ರತಿಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಕುರಿತು ರಾಜ್ಯ ಸರ್ಕಾರದಿಂದ ವಾಸ್ತವಿಕ ವರದಿ ಪಡೆಯುವಂತೆ ಕೇಸರಿ ಪಕ್ಷ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಈ ಮಧ್ಯೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ರಾಜ್ಯದ ಉನ್ನತ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp