ಕೊರೋನಾ ಹೆಚ್ಚಳ: ಬಿಹಾರದಲ್ಲಿ ಮೇ 15 ರವರೆಗೆ ಲಾಕ್‌ಡೌನ್ ಜಾರಿ

ಬಿಹಾರದಲ್ಲೂ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 15 ರವರೆಗೆ ಲಾಕ್‌ಡೌನ್ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪ್ರಕಟಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರದಲ್ಲೂ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 15 ರವರೆಗೆ ಲಾಕ್‌ಡೌನ್
ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪ್ರಕಟಿಸಿದ್ದಾರೆ.

ಲಾಕ್‌ಡೌನ್‌ಗೆ ಸಂಬಂಧಿಸಿದ ವಿವರವಾದ ಮಾರ್ಗಸೂಚಿಗಳನ್ನು ವಿಪತ್ತು ನಿರ್ವಹಣಾ ತಂಡ ನಿರ್ಧರಿಸುತ್ತದೆ ಎಂದು ಬಿಹಾರ ಸಿಎಂ
ತಿಳಿಸಿದ್ದಾರೆ.

ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸೋಮವಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಬಿಹಾರದಲ್ಲಿ ಸೋಮವಾರ 11,407 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು 82 ಸಾವುಗಳು ವರದಿಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com