12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳು; ಕೆಲ ರಾಜ್ಯಗಳಲ್ಲಿ ಇಳಿ ಮುಖವಾಗುತ್ತಿದೆ ಸೋಂಕು: ಕೇಂದ್ರ ಆರೋಗ್ಯ ಇಲಾಖೆ

ದೆಹಲಿ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೆಲ ರಾಜ್ಯಗಳಲ್ಲಿ ಸೋಂಕು ಇಳಿಮುಖವಾಗುತ್ತಿರುವ ಚಿಹ್ನೆ ತೋರುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಲವ್ ಅಗರ್ವಾಲ್
ಲವ್ ಅಗರ್ವಾಲ್

ನವದೆಹಲಿ: ದೆಹಲಿ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೆಲ ರಾಜ್ಯಗಳಲ್ಲಿ ಸೋಂಕು ಇಳಿಮುಖವಾಗುತ್ತಿರುವ ಚಿಹ್ನೆ ತೋರುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತು ಹೇಳಿಕೆ ನೀಡಿರುವ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು, ದೇಶಾದ್ಯಂತ ಇದುವರೆಗೆ ಶೇ.81.77 ರಷ್ಟು ಜನರು ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಸುಮಾರು 34 ಲಕ್ಷ ಸಕ್ರೀಯ ಪ್ರಕರಣಗಳಿವೆ. ಸುಮಾರು 2 ಲಕ್ಷದವರೆಗೆ ಜನರು ಈ ಮಾರಕ ಸೋಂಕಿಗೆ ಪ್ರಾಣ  ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಸುಮಾರು 3417 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೇಶದ ಒಟ್ಟು 12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿದ್ದರೆ, 7 ರಾಜ್ಯಗಳಲ್ಲಿ 50 ಸಾವಿರದಿಂದ 1 ಲಕ್ಷದವರೆಗೆ ಸಕ್ರಿಯ ಪ್ರಕರಣಗಗಳಿವೆ ಹಾಗೂ 17 ರಾಷ್ಯಗಳಲಿ  50 ಸಾವಿರಕ್ಕಿಂತಲೂ ಕಡಿಮೆ ಸಕ್ರೀಯ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.
 
ಈ ಮಧ್ಯೆ ದೆಹಲಿ, ಮಧ್ಯಪ್ರದೇಶ, ಛತ್ತೀಸ್‌ಗಡ, ಮಹಾರಾಷ್ಟ್ರ ಮತ್ತು ಪಂಜಾಬ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಕುಸಿತದ ಆರಂಭಿಕ ಲಕ್ಷಣಗಳನ್ನು ತೋರಿಸುತ್ತಿವೆ. ಆದರೆ ಇವು ಯಾವುದನ್ನೂ ವಿಶ್ಲೇಷಿಸಲು ಬಹಳ ಮುಂಚಿನ ಸಂಕೇತಗಳಾಗಿವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ  ಸ್ಪಷ್ಟ ಚಿತ್ರಣ ದೊರೆಯಲಿದೆ. ಆದಾಗ್ಯೂ, ಇತರ ಕೆಲವು ರಾಜ್ಯಗಳು ಕೋವಿಡ್ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಪ್ರವೃತ್ತಿಯನ್ನು ತೋರಿಸುತ್ತಿವೆ. ಹೀಗಾಗಿ ಈ ರಾಜ್ಯಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಲವ್ ಅಗರ್ವಾಲ್ ಹೇಳಿದ್ದಾರೆ. 

ದೈನಂದಿನ ಸೋಂಕು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚಂಡೀಗಡ, ಹರಿಯಾಣ, ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯ ರಾಜ್ಯಗಳಿವೆ.

ಮೇ 2 ರಂದು ಚೇತರಿಕೆ ಪ್ರಮಾಣವು ಶೇಕಡಾ 78 ರಷ್ಟಿದ್ದು, ಇದು ಮೇ 3 ರಂದು ಸುಮಾರು 82 ಪ್ರತಿಶತದಷ್ಟು ಏರಿದೆ ಎಂದು ಅವರು ಹೇಳಿದರು. ಇವುಗಳು ಆರಂಭಿಕ ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಸರಕಾರವು ನಿಯಮಿತವಾಗಿ ಕೆಲಸ ಮಾಡಬೇಕಾಗಿದೆ ಎಂದು  ಅಗರ್ವಾಲ್ ಗಮನಸೆಳೆದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com