ಕೋವಿಡ್-19: ಜೆಇಇ ಮೇನ್‌ ಮೇ 2021 ಪರೀಕ್ಷೆ ಮುಂದೂಡಿಕೆ- ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಜಂಟಿ ಪ್ರವೇಶ ಪರೀಕ್ಷೆ - ಮೇನ್ (ಜೆಇಇ ಮೇನ್) ಮೇ 2021ರ ಸೆಶನ್ ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.

Published: 04th May 2021 05:07 PM  |   Last Updated: 04th May 2021 05:14 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : Online Desk

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಜಂಟಿ ಪ್ರವೇಶ ಪರೀಕ್ಷೆ - ಮೇನ್ (ಜೆಇಇ ಮೇನ್) ಮೇ 2021ರ ಸೆಶನ್ ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.

"ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಎನ್‌ಟಿಎಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ" ಎಂದು ಪೋಖ್ರಿಯಾಲ್ ಟ್ವೀಟ್ ಮಾಡಿದ್ದಾರೆ. ಜೆಇಇ (ಮೇನ್) - 2021 ಮೇ ಸೆಶನ್ ಅನ್ನು 24, 25, 26, 27, 28 ಮೇ 2021 ರಂದು ನಿಗದಿಪಡಿಸಲಾಗಿತ್ತು."ಆದಾಗ್ಯೂ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜೆಇಇ (ಮೇನ್) - 2021 ಮೇ ಸೆಶನ್  ಅನ್ನು ಮುಂದೂಡಲಾಗುತ್ತಿದೆ," ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ.

ಈ ಹಿಂದೆ, ದೇಶಾದ್ಯಂತ ಕೋವಿಡ್ -19 ಪ್ರಕರಣಗಳ ಏರಿಕೆಯಿಂದಾಗಿ ಜೆಇಇ-ಮೇನ್ ಏಪ್ರಿಲ್ ಸೆಶನ್ ಅನ್ನು ಮುಂದೂಡಲಾಗಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಪ್ರಿಲ್ 27, 28 ಮತ್ತು 30 ರಂದು ನಿಗದಿಯಾಗಿದ್ದ ಜೆಇಇ (ಮೇನ್ ) - 2021 ಏಪ್ರಿಲ್ ಸೆಶನ್ ಅನ್ನು  ಈಗಾಗಲೇ ಮುಂದೂಡಲಾಗಿದೆ. ಏಪ್ರಿಲ್ ಮತ್ತು ಮೇ ಸೆಶನ್ ಗಳ ಮರುಹೊಂದಿಸುವಿಕೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುತ್ತದೆ. ಮೇ ಸೆಶನ್ ನ ನೋಂದಣಿಯನ್ನು ನಂತರದ ಹಂತದಲ್ಲಿ ಪ್ರಕಟಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಇನ್ನು ಮೊದಲ ಎರಡು ಸೆಷನ್‌ಗಳು ಈಗಾಗಲೇ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಪೂರ್ಣಗೊಂಡಿವೆ

ಪರೀಕ್ಷೆಗಳಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳಿಗಾಗಿ ಅಧಿಕೃತ ಎನ್‌ಟಿಎ ವೆಬ್‌ಸೈಟ್ (www.nta.ac.in) ಮತ್ತು (https://jeemain.nta.nic.in/) ಭೇಟಿ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp