ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ
ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ: ರಾಜ್ಯಪಾಲರಿಗೆ ಪ್ರಧಾನಿ ಕರೆ; ಆತಂಕ ವ್ಯಕ್ತ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉಂಟಾಗಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉಂಟಾಗಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಪಾಲರು, "ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪಶ್ಚಿಮ ಬಂಗಾಳದಲ್ಲಿ ಉಂಟಾಗುತ್ತಿರುವ ರಾಜಕೀಯ ಹಿಂಶಾಚಾರದ ಬಗ್ಗೆ ದುಃಖ ಹಾಗೂ ಆತಂಕ ವ್ಯಕ್ತಪಡಿಸಿದರು" ಎಂದು ಹೇಳಿದ್ದಾರೆ 

ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ. 

ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ರಾಜ್ಯಪಾಲರು ಪೊಲೀಸರು ಹಾಗೂ ಕೋಲ್ಕತ್ತಾ ಆಯುಕ್ತರಿಗೆ ವಿವೇಚನೆ ಇಲ್ಲದೇ ನಡೆಯುತ್ತಿರುವ, ರಾಜಕೀಯ ಹಿಂಸಾಚಾರವನ್ನು ತಡೆಯುವಂತೆ ಸೂಚನೆ ನೀಡಿದ್ದರು. ಈ ಹಿಂಸಾಚಾರವನ್ನು ಪ್ರಜಾಪ್ರಭುತ್ವ ತಲೆ ತಗ್ಗಿಸುವ, ಅವಮಾನಕಾರಿ ಕೃತ್ಯ ಎಂದು ಹೇಳಿದ್ದರು.

"ಜಾಗತಿಕ ಮಟ್ಟದಲ್ಲಿ ಬಂಗಾಳಿಗಳು ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದು, ಅರಾಜಕತೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ" ಎಂದು ರಾಜ್ಯಪಾಲರು ಹೇಳಿದ್ದಾರೆ. 

ಇದೇ ವೇಳೆ ಬಿಜೆಪಿ ನಾಯಕ ಸ್ವಪನ್ ದಾಸ್ ಗುಪ್ತ ಮಾತನಾಡಿದ್ದು, ಕೋಲ್ಕತ್ತ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಈ ರಾಜಕೀಯ ಹಿಂಸಾಚಾರದ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. 

ನಂದಿಗ್ರಾಮ, ಕೂಚ್ ಬೆಹಾರ್ ನ ಸಿತಾಲ್ಕುಚಿ ಗಳಲ್ಲಿ ಬಿಜೆಪಿ ಕಚೇರಿಯ ಮೇಲೆ ದಾಳಿ ನಡೆದಿದ್ದು, ಧ್ವಂಸಗೊಳಿಸಲಾಗಿದೆ. ಇನ್ನೂ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಚುನಾವಣೆಯ ಫಲಿತಾಂಶದ ನಂತರ ರಾಜಕೀಯ ಕಾರಣಗಳಿಂದಾಗಿ ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

Related Stories

No stories found.

Advertisement

X
Kannada Prabha
www.kannadaprabha.com