ಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಸ್ಟಾಲಿನ್‍ ಆಯ್ಕೆ: ನಾಳೆ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಯ ಹಕ್ಕು ಮಂಡನೆ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಅಭೂತಪೂರ್ವ ಗೆಲುವು ದಾಖಲಿಸಿದ ಎರಡು ದಿನದ ನಂತರ ಮಂಗಳವಾರ ಪಕ್ಷದ ಅಧ್ಯಕ್ಷ ಎಂ ಕೆ ಸ್ಟಾಲಿನ್, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಎಂಕೆ ಸ್ಟಾಲಿನ್
ಎಂಕೆ ಸ್ಟಾಲಿನ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಅಭೂತಪೂರ್ವ ಗೆಲುವು ದಾಖಲಿಸಿದ ಎರಡು ದಿನದ ನಂತರ ಮಂಗಳವಾರ ಪಕ್ಷದ ಅಧ್ಯಕ್ಷ ಎಂ ಕೆ ಸ್ಟಾಲಿನ್, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಇಂದು ಡಿಎಂಕೆ ಪಕ್ಷದ ಕಚೇರಿ ಅನ್ನಾ ಅರಿವಲಯಮ್‍ ನಲ್ಲಿ ನಡೆದ ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಸ್ಟಾಲಿನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸ್ಟಾಲಿನ್ ಅವರು ಬುಧವಾರ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡುತ್ತಿದ್ದು, ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ.

ಎಂಕೆ ಸ್ಟಾಲಿನ್ ಅವರು ಈ ತಿಂಗಳ ೭ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಡಿಎಂಕೆ ಪಕ್ಷ ತನ್ನ ಮೈತ್ರಿಕೂಟದ ಬೆಂಬಲದೊಂದಿಗೆ ೧೫೮ ಸ್ಥಾನಗಳನ್ನು ಗೆದ್ದಿದೆ ಹೀಗಾಗಿ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅವರು ಈ ತಿಂಗಳ ೭ ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅವರ ಸಹೋದರಿ ಹಾಗೂ ಸಂಸದೆ ಎಂಕೆ ಕನಿಮೊಳಿ ತಿಳಿಸಿದ್ದಾರೆ

ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಸರಳವಾಗಿ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com