ಕೋವಿಡ್-19: ಉತ್ತರ ಪ್ರದೇಶದಲ್ಲಿ ಮೇ 10 ರವರೆಗೆ ಕೊರೋನಾ ಕರ್ಫ್ಯೂ ವಿಸ್ತರಣೆ

ಕೊರೋನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಕೊರೋನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಅನ್ನು ಮೇ 10ರ ಬೆಳಗ್ಗೆ 7 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಕೊರೋನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 ರವರೆಗೆ ಮುಚ್ಚಲ್ಪಡುತ್ತವೆ. ಕರ್ಫ್ಯೂ ಮತ್ತೆ ವಿಸ್ತರಿಸುವ ಬಗ್ಗೆ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಕೊರೋನಾ ವೈರಸ್ ಚೈನ್ ಬ್ರೇಕ್ ಮಾಡಲು ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಕೊರೋನಾ ಕರ್ಫ್ಯೂ ವೇಳೆ ಎಲ್ಲಾ ಅಗತ್ಯ ಸೇವೆಗಳಿಗೆ ಮತ್ತು ಲಸಿಕೆ ಅಭಿಯಾನಕ್ಕೆ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ ಲಾಕ್ ಡೌನ್ ಪದ ಬಳಸಲು ಅವರು ನಿರಾಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com