ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು

ಹಿರಿಯ ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಬಿಜೆಪಿಯ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕ ವಿಜೇಶ್ ಲುನಾವತ್ (55) ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

Published: 05th May 2021 08:39 PM  |   Last Updated: 05th May 2021 08:39 PM   |  A+A-


MP: BJP leader Vijesh Lunawat, who tested COVID positive, dies at 55

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು

Posted By : Srinivas Rao BV
Source : The New Indian Express

ಭೋಪಾಲ್: ಹಿರಿಯ ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಬಿಜೆಪಿಯ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕ ವಿಜೇಶ್ ಲುನಾವತ್ (55) ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

ಹೃದಯಸ್ತಂಭನದಿಂದ ವಿಜೇಶ್ ಲುನಾವತ್ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ಸಮಯದಿಂದ ಲುನಾವತ್ ಅನಾರೋಗ್ಯದಿಂದ ಬಳಲುತ್ತಿದ್ದರು ಇತ್ತೀಚೆಗೆ ಕೋವಿಡ್-19 ಸೋಂಕು ತಗುಲಿತ್ತು. 

ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಬಿಜೆಪಿ ನಾಯಕ ಅಗಲಿದ್ದಾರೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಲುನಾವತ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. "ಲುನಾವತ್ ಸಮರ್ಥ ಸಂಘಟಕನಾಗಿದ್ದರು, ಪರಿಣಾಮಕಾರಿ ಸಂವಹನಕಾರ ಹಾಗೂ ಚುನಾವಣಾ ನಿರ್ವಹಣೆಯ ತಜ್ಞರಾಗಿದ್ದರು. ಮಧ್ಯಪ್ರದೇಶ ಬಿಜೆಪಿಯನ್ನು ಬಲಿಷ್ಠಗೊಳಿಸುವುದಕ್ಕೆ ಮಾಸ್ಟರ್ ಸ್ಟ್ರಾಟಜಿಸ್ಟ್ ಆಗಿದ್ದರು ಎಂದು ಚೌಹಾಣ್ ಹೇಳಿದ್ದಾರೆ. 

"ಅವರ ಸಾವಿನಿಂದ ಉಂಟಾಗಿರುವ ನಷ್ಟವನ್ನು ತುಂಬಲು ಸಾಧ್ಯವಿಲ್ಲ" ಎಂದು ಸಿಎಂ ಹೇಳಿದ್ದಾರೆ. ಲುನಾವತ್ ಸಾವಿಗೆ ಕಮಲ್ ನಾಥ್ ಸೇರಿದಂತೆ ವಿಪಕ್ಷ ನಾಯಕರು ಸಂತಾಪ ಸೂಚಿಸಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp