ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಟಾಲಿನ್, ನೂತನ ಸರ್ಕಾರ ರಚನೆ ಹಕ್ಕು ಮಂಡನೆ

ಡಿಎಂಕೆ ಅಧ್ಯಕ್ಷ ಹಾಗೂ ನಿಯೋಜಿತ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬುಧವಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

Published: 05th May 2021 02:25 PM  |   Last Updated: 05th May 2021 02:25 PM   |  A+A-


DMK leader M K Stalin

ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್

Posted By : Lingaraj Badiger
Source : UNI

ಚೆನ್ನೈ: ಡಿಎಂಕೆ ಅಧ್ಯಕ್ಷ ಹಾಗೂ ನಿಯೋಜಿತ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬುಧವಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಸ್ಟಾಲಿನ್ ಅವರೊಂದಿಗಿದ್ದ ಹಿರಿಯ ಡಿಎಂಕೆ ನಾಯಕರಾದ ದೊರೈಮುರುಗನ್, ಟಿ ಆರ್ ಬಾಲು ಮತ್ತು ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಅವರು ಸ್ಟಾಟಿಲ್‍ ರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ನಿರ್ಣಯ ಪತ್ರವನ್ನು ರಾಜ್ಯಪಾಲರಿಗೆ ಹಸ್ತಾಂತರಿಸಿದರು. ಅಲ್ಲದೆ, ಡಿಎಂಕೆ ಚಿನ್ಹೆಯಡಿ ಸ್ಪರ್ಧಿಸಿ ಗೆದ್ದ 133 ಶಾಸಕರ ಬೆಂಬಲವನ್ನು ಒಳಗೊಂಡ ಪತ್ರ ಮತ್ತು ಮಂತ್ರಿ ಮಂಡಳದ ಪಟ್ಟಿಯನ್ನೂ ಸ್ಟಾಲಿನ್‍ ರಾಜ್ಯಪಾಲರಿಗೆ ಸಲ್ಲಿಸಿದರು.

ಹತ್ತು ವರ್ಷಗಳ ನಂತರ ಆರನೇ ಬಾರಿಗೆ ಡಿಎಂಕೆ ಅಧಿಕಾರಕ್ಕೆ ಮರಳಲು ಕಾರಣರಾದ ಸ್ಟಾಲಿನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಸಂಜೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಡಿಎಂಕೆ ಪಕ್ಷ ತನ್ನ ಮೈತ್ರಿಕೂಟದ ಬೆಂಬಲದೊಂದಿಗೆ ೧೫೮ ಸ್ಥಾನಗಳನ್ನು ಗೆದ್ದಿದ್ದು, ಸ್ಟಾಲಿನ್ ಅವರು ಈ ತಿಂಗಳ ೭ ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp