ರಾಜ್ಯಕ್ಕೆ ಆಕ್ಸಿಜನ್ ಹೆಚ್ಚಿಸಬೇಕೆಂಬ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ 'ಸುಪ್ರೀಂ' ಮೊರೆ ಹೋದ ಕೇಂದ್ರ ಸರ್ಕಾರ!

ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ದೈನಂದಿನ ಧ್ರುವಿಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ದೈನಂದಿನ ಧ್ರುವಿಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ
ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಪ್ರಸ್ತುತ ಕರ್ನಾಟಕಕ್ಕೆ 965 ಮೆಟ್ರಿಕ್ ಟನ್ ಧ್ರುವೀಕೃತ ವೈದ್ಯಕೀಯ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ತುರ್ತಾಗಿ ತಡೆಹಿಡಿಯುವ ಅಗತ್ಯವಿದೆ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದಲ್ಲಿ ಮನವಿ ಮಾಡಿದ್ದಾರೆ.

ಯಾವುದೇ ಆದೇಶ ನೀಡುವುದರ ಮುನ್ನ ಕಾಗದ ಪತ್ರವನ್ನು ನೋಡಬೇಕಾಗಿದೆ. ಕೆಲ ನಿಮಿಷಗಳಲ್ಲಿ ಇದನ್ನು ಒಟ್ಟುಗೂಡಿಸುವಂತೆ ನ್ಯಾಯಮೂರ್ತಿ ಎಂ.ಆರ್. ಶಾ ಅವರನ್ನೊಳಗೊಂಡ ಪೀಠ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com