ಕೋವಿಡ್‌ ಲಸಿಕೆ: ಭಾರತ್‌ ಬಯೋಟೆಕ್‌ಗೆ 1104.78 ಕೋಟಿ ರೂ. ಪಾವತಿ - ಅನುರಾಗ್‌ ಠಾಕೂರ್

ದೇಶದಲ್ಲಿ ಕೋವಿಡ್ ಲಸಿಕೆ ಉತ್ಪಾದಿಸುವ ಕಂಪನಿಗೆ ನೀಡಬೇಕಾದ ಹಣವನ್ನು ಪಾವತಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಅನುರಾಗ್ ಠಾಕೂರ್
ಅನುರಾಗ್ ಠಾಕೂರ್

ನವದೆಹಲಿ: ದೇಶದಲ್ಲಿ ಕೋವಿಡ್ ಲಸಿಕೆ ಉತ್ಪಾದಿಸುವ ಕಂಪನಿಗೆ ನೀಡಬೇಕಾದ ಹಣವನ್ನು ಪಾವತಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿ. ಕಂಪನಿಗೆ ಇಲ್ಲಿಯವರೆಗೆ ಒಟ್ಟು 1104.78 ಕೋಟಿ ರೂ. ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿ. ಕಂಪನಿಯಿಂದ ಒಟ್ಟು 8 ಕೋಟಿ ಕೋವಿಡ್ ಲಸಿಕೆಯ ಡೋಸ್ ಗಳನ್ನು ಆರ್ಡರ್ ಮಾಡಲಾಗಿತ್ತು. ಅದರಲ್ಲಿ ಇಲ್ಲಿಯವರೆಗೆ 1.8813 ಕೋಟಿ ಡೋಸ್ ಗಳನ್ನು ಪೂರೈಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಲಸಿಕೆಗಳಿಗೆ ಒಟ್ಟು 342.28 ಕೋಟಿ ರೂ. ದರದ ಬಿಲ್ ನೀಡಲಾಗಿತ್ತು. ಸರ್ಕಾರ ಇಲ್ಲಿಯವರೆಗೆ 1104.78  ಕೋಟಿ ರೂ. ಪಾವತಿಸಿದೆ. ಇದು 2021ರ ಮೇ, ಜೂನ್, ಜುಲೈ ತಿಂಗಳುಗಳಲ್ಲಿ ಪೂರೈಕೆಯಾಗುವ ಲಸಿಕೆಗಳ ದರವನ್ನು ಕೂಡ ಒಳಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com