ಕೊರೋನಾ ನಿಯಂತ್ರಣಕ್ಕೆ ಕಾರ್ಯ ಯೋಜನೆಯೇ ಇಲ್ಲದ ಸರ್ಕಾರ; ಪ್ರಧಾನಿ ವೈಫಲ್ಯದಿಂದಾಗಿ ಮತ್ತೊಂದು ಲಾಕ್ಡೌನ್ ನತ್ತ ಭಾರತ: ರಾಹುಲ್ ಗಾಂಧಿ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಯಾವುದೇ ಕಾರ್ಯ ಯೋಜನೆ ಇಲ್ಲ..ಪ್ರಧಾನಿ ಮೋದಿ ಸರ್ಕಾರದ ವೈಫಲ್ಯದಿಂದಾಗಿ ಭಾರತ ದೇಶ ಮತ್ತೊಂದು ಲಾಕ್ಡೌನ್ ನತ್ತ ಸಾಗಿದೆ ಎಂದು ಕಾಂಗೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಯಾವುದೇ ಕಾರ್ಯ ಯೋಜನೆ ಇಲ್ಲ..ಪ್ರಧಾನಿ ಮೋದಿ ಸರ್ಕಾರದ ವೈಫಲ್ಯದಿಂದಾಗಿ ಭಾರತ ದೇಶ ಮತ್ತೊಂದು ಲಾಕ್ಡೌನ್ ನತ್ತ ಸಾಗಿದೆ ಎಂದು ಕಾಂಗೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಕೋವಿಡ್‌-19 ನಿರ್ವಹಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೈಫಲ್ಯ, ಸಾಂಕ್ರಾಮಿಕ ಪ್ರಸರಣ ತಡೆಯುವಲ್ಲಿ ಅಸಮರ್ಪಕ ಕಾರ್ಯತಂತ್ರದಿಂದಾಗಿ ದೇಶ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ನತ್ತ ಸಾಗುವಂತಾಗಿದೆ' ಎಂದು ಟೀಕಿಸಿದ್ದಾರೆ.

‘ಕಳೆದ ವರ್ಷ ಯಾವುದೇ ತಯಾರಿ ಇಲ್ಲದೇ ಲಾಕ್‌ಡೌನ್‌ ವಿಧಿಸಿದ ಕಾರಣ ಜನರು ತತ್ತರಿಸಿ ಹೋದರು. ಹೀಗಾಗಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸುವುದನ್ನು ನಾನು ವಿರೋಧಿಸುತ್ತೇನೆ..ಬಡ ಜನರಿಗಾಗಿ ಸೂಕ್ತ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. 

ಇದೇ ವೇಳೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕುರಿತು ಕಿಡಿಕಾರಿರುವ ರಾಹುಲ್ ಗಾಂಧಿ, 'ಐದು ರಾಜ್ಯಗಳಲ್ಲಿ ಚುನಾವಣೆಗಳು ಮುಗಿದಿವೆ.. ಹೀಗಾಗಿ ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಹೆಚ್ಚಿಸಲಾಗುತ್ತಿದೆ. ಈಗ ಕೇಂದ್ರ ಸರ್ಕಾರ ಮತ್ತೆ ಲೂಟಿ ಆರಂಭಿಸಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com