ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯ 

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. 
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆ (ಸಂಗ್ರಹ ಚಿತ್ರ)
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆ (ಸಂಗ್ರಹ ಚಿತ್ರ)

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವುದರ ಜೊತೆಗೆ ಸ್ಥಳೀಯ ಪರಿಸ್ಥಿತಿಯ ಬಗ್ಗೆ ಕೂಡ ಈ ಸಮಿತಿ ವರದಿ ನೀಡಲಿದೆ. 

ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ಕಾರ್ಯನಿರ್ವಹಣೆ ಮಾಡಲಿದ್ದು, ಸಮಿತಿಯ ಸದಸ್ಯರು ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಮೇ.05 ರಂದು ಗೃಹ ಸಚಿವಾಲಯ ರಾಜ್ಯಕ್ಕೆ ವರದಿ ಸಲ್ಲಿಸುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. 

ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದರೆ ಅದನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವನೋತ್ತರ ಗಲಭೆಯಲ್ಲಿ ಕನಿಷ್ಟ 6 ಮಂದಿ ಸಾವನ್ನಪ್ಪಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿ ಬೆಂಬಲಿತ ಗೂಂಡಾಗಳು ಹತ್ಯೆ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ. 14 ಮಂದಿ ಬಿಜೆಪಿ ಕಾರ್ಯಕರ್ತರನ್ನು ಈ ವರೆಗೂ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com