ರಾಜಕೀಯ ಭಿನ್ನಾಭಿಪ್ರಾಯ ಮೀರಿ ಕೋವಿಡ್ ವಿರುದ್ಧ ಹೋರಾಡಬೇಕಿದೆ, ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಕಳಪೆ: ಸೋನಿಯಾ ಗಾಂಧಿ

ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದಾಗಿದ್ದು, ಎಲ್ಲರೂ ರಾಷ್ಟ್ರಮಟ್ಟದಲ್ಲಿ ಒಟ್ಟಾಗಿ ಹೋರಾಡಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ (ಸಿಪಿಪಿ) ಹೇಳಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದಾಗಿದ್ದು, ಎಲ್ಲರೂ ರಾಷ್ಟ್ರಮಟ್ಟದಲ್ಲಿ ಒಟ್ಟಾಗಿ ಹೋರಾಡಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ (ಸಿಪಿಪಿ) ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮುಂದಿನ ದಿನಗಳಲ್ಲಿ ರಾಜಕೀಯ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್ ಪಕ್ಷದ ಎರಡೂ ಸದನಗಳ ಸಂಸದರ ಸಭೆಯನ್ನು ಕರೆದಿದ್ದರು.

ಸಭೆಯಲ್ಲಿ ಮಾತನಾಡುತ್ತಾ ಸೋನಿಯಾ ಗಾಂಧಿಯವರು, ಕೋವಿಡ್-19 ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ತುರ್ತಾಗಿ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕೆಂದು ಹೇಳಿದರು. ಸಾಂಕ್ರಾಮಿಕ ವಿರುದ್ಧ ಹೋರಾಡಲು ಸಾಮೂಹಿಕ ಕ್ರಮ ಮತ್ತು ನಿಖರತೆಯನ್ನು ತರಲು ಸ್ಥಾಯಿ ಸಮಿತಿಯನ್ನು ರಚಿಸಬೇಕೆಂದು ಕೂಡ ಒತ್ತಾಯಿಸಿದರು.

ಕಳಪೆ ಸಾಧನೆ ಬೇಸರ ತಂದಿದೆ: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ನಂತರ ಸೋನಿಯಾ ಗಾಂಧಿಯವರು ಪಕ್ಷದ ನಾಯಕರ ಸಭೆ ಕರೆದಿರುವುದು ಇದು ಮೊದಲ ಸಲ. ಫಲಿತಾಂಶದ ಪರಾಮರ್ಶೆ ಬಗ್ಗೆ ಕಾಂಗ್ರೆಸ್ ಕಾರ್ಯಕಾರಣಿ ಸಭೆಯನ್ನು ಸದ್ಯದಲ್ಲಿಯೇ ನಡೆಸಲಾಗುವುದು ಎಂದರು.

ಈ ಚುನಾವಣೆಯಲ್ಲಿನ ಹಿನ್ನಡೆಯನ್ನು ಪಕ್ಷದಲ್ಲಿ ನಾವು ಸಾಮೂಹಿಕವಾಗಿ, ಪ್ರಾಮಾಣಿಕವಾಗಿ ನಮ್ರತೆಯಿಂದ ಸ್ವೀಕರಿಸೋಣ, ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಕಳಪೆ ಸಾಧನೆ ತೀರಾ ಬೇಸರ ತಂದಿದೆ ಎಂದರು.

ಕೋವಿಡ್ ನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಕಾಂಗ್ರೆಸ್ ಆರಂಭದಿಂದಲೂ ಟೀಕಿಸುತ್ತಲೇ ಬಂದಿದೆ. ದೇಶದಲ್ಲಿ ಇಂದು ಕೋವಿಡ್ -19 ಸೋಂಕಿತರ ಸಂಖ್ಯೆ 2 ಕೋಟಿಯ 14 ಲಕ್ಷದ 91 ಸಾವಿರದ 598ಕ್ಕೇರಿದ್ದು, 4 ಲಕ್ಷದ 14 ಸಾವಿರದ 188 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com