ಬಂಗಾಳದಲ್ಲಿ ಕೋವಿಡ್ ಪರಿಸ್ಥಿತಿ ಹದಗೆಟ್ಟಿದ್ದು, ಆಕ್ಸಿಜನ್ ಪೂರೈಕೆ ಹೆಚ್ಚಿಸುವಂತೆ ಮೋದಿಗೆ ಮಮತಾ ಪತ್ರ

ಕೋವಿಡ್ -19 ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಪೂರೈಕೆ ಹೆಚ್ಚಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಕೋವಿಡ್ -19 ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಪೂರೈಕೆ ಹೆಚ್ಚಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಆಮ್ಲಜನಕದ ಅವಶ್ಯಕತೆ ಹೆಚ್ಚಾಗಿದ್ದರೂ ಕೇಂದ್ರ ಸರ್ಕಾರ ಬಂಗಾಳದಲ್ಲಿ ಉತ್ಪಾದನೆಯಾದ ಆಕ್ಸಿಜನ್ ಅನ್ನು ಇತರ ರಾಜ್ಯಗಳಿಗೆ ಹಂಚಿಕೆ ಮಾಡುವುದನ್ನು ಹೆಚ್ಚಿಸಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ನಮ್ಮ ರಾಜ್ಯದಲ್ಲಿ ದೈನಂದಿನ ಆಮ್ಲಜನಕದ ಬಳಕೆ 470 ಮೆ.ಟನ್.ಗೆ ಏರಿದೆ ಮತ್ತು ಇದು ಒಂದು ವಾರದಲ್ಲಿ ದಿನಕ್ಕೆ ಸುಮಾರು 550 ಮೆ.ಟನ್.ಗೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

"ವೈದ್ಯಕೀಯ ಆಮ್ಲಜನಕದ ಹಂಚಿಕೆಯನ್ನು ಪರಿಶೀಲಿಸಬೇಕು ಮತ್ತು ಪಶ್ಚಿಮ ಬಂಗಾಳಕ್ಕೆ ದಿನಕ್ಕೆ ಕನಿಷ್ಠ 550 ಮೆಟ್ರಿಕ್ ಟನ್ ಹಂಚಿಕೆಗಾಗಿ ಸೂಚನೆ ನೀಡುವಂತೆ ನಾನು ತಮ್ಮಲ್ಲಿ ವಿನಂತಿಸುತ್ತೇನೆ" ಎಂದು ದೀದಿ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com