ರಾಜ್ಯಗಳ ಬಳಿ ಇನ್ನೂ 90 ಲಕ್ಷ ಡೋಸ್ ಕೋವಿಡ್ ಲಸಿಕೆಗಳು ಲಭ್ಯ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 90ಲಕ್ಷಕ್ಕೂ ಅಧಿಕ ಕೋವಿಡ್‍ ಲಸಿಕೆಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 90ಲಕ್ಷಕ್ಕೂ ಅಧಿಕ ಕೋವಿಡ್‍ ಲಸಿಕೆಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ದೇಶಾದ್ಯಂತ ಈವರೆಗೆ ಅನುಪಯುಕ್ತ ಸೇರಿದಂತೆ 16,44,77,100 ಡೋಸ್‍ ಗಳನ್ನು ಬಳಕೆ ಮಾಡಲಾಗಿದೆ ಎಂದು ಸಚಿವಾಲಯ ಶುಕ್ರವಾರ ಬೆಳಗ್ಗೆ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಈವರೆಗೆ 17.35 ಕೋಟಿ (17,35,07,770) ಡೋಸ್ ಲಸಿಕೆಯನ್ನು  ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಇನ್ನೂ 10 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ಹತ್ತು ರಾಜ್ಯಗಳು ಒಂದು ದಿನದಲ್ಲಿ ವರದಿಯಾದ ಹೊಸ ಕೋವಿಡ್ -19 ಪ್ರಕರಣಗಳಲ್ಲಿ ಶೇಕಡಾ 71.81 ರಷ್ಟು ಹೊಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕೊರೋನಾ ಎರಡನೆ ಅಲೆಯಿಂದ ಸೋಂಕು  ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು ಶುಕ್ರವಾರ ಹೊಸದಾಗಿ 4.14 ಲಕ್ಷ ಹೊಸ ಸೋಂಕು ಪ್ರಕರಣ  ಖಚಿತವಾಗಿದ್ದು,  3,915 ಸಾವು ಸಂಭವಿಸಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.14 ಕೋಟಿಗೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 2,ಲಕ್ಷದ 34,083ಕ್ಕೆ ತಲುಪಿದೆ. ದೇಶದಲ್ಲಿ  ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 36,45,164ಕ್ಕೆ ಹೆಚ್ಚಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com