ಮೋದಿ, ಹರ್ಷವರ್ಧನ್ ಜವಾಬ್ದಾರಿ ನಿಭಾಯಿಸುತ್ತಿಲ್ಲ: ಚಿದಂಬರಂ

ದೇಶ ಮತ್ತು  ಜನರ ಆರೋಗ್ಯ ಪರಿಸ್ಥಿತಿ ವಿಪರೀತ ಹದಗೆಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿ ಸತ್ಯ ಒಪ್ಪಿಕೊಂಡು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.
ಚಿದಂಬರಂ
ಚಿದಂಬರಂ

ನವದೆಹಲಿ: ದೇಶ ಮತ್ತು  ಜನರ ಆರೋಗ್ಯ ಪರಿಸ್ಥಿತಿ ವಿಪರೀತ ಹದಗೆಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿ ಸತ್ಯ ಒಪ್ಪಿಕೊಂಡು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಧುರೀಣ ಪಿ. ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶ ಅತಿ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಪಿಎಂ ಮೋದಿ ಮತ್ತೆ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಬ್ಬರೂ ಜವಾಬ್ದಾರಿ ಅರಿತು ಪರಿಸ್ಥಿತಿ ನಿಭಾಯಿಸುತ್ತಿಲ್ಲ ಎಂದು ದೂರಿದ್ದಾರೆ.ಎಲ್ಲಾ ರಾಜ್ಯಗಳಲ್ಲಿ ಪರಿಸ್ಥಿತಿ ಭಿನ್ನವಾಗಿದ್ದರೂ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಅಣಕಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಒಂದೇ ದಿನ 4.14 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ, 
ಸಾಂಕ್ರಾಮಿಕ ರೋಗ ದೇಶದ ಪರಿಸ್ಥಿತಿಯನ್ನು ತೀರಾ ಹದಗೆಡುತ್ತಿದೆ ಇಂತಹ ವಿಷಮ ಸನ್ನಿವೇಶದಲ್ಲಿ ರೋಗದ ವಿರುದ್ಧ ಹೋರಾಡಲು ಬೇಕಾದ ಲಸಿಕೆಗಳು, ಹಾಸಿಗೆಗಳ ತೀವ್ರ ಕೊರತೆ ಎದುರಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

ಇನ್ನು ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಇದೀಗ ಸಾವಿನ ಸಂಖ್ಯೆ 2.34 ಲಕ್ಷಕ್ಕೆ ಏರಿಕೆಯಾಗಿದೆ ಎಂದೂ ಚಿದು ಅಸಮಾಧಾನ ಹೊರ ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com