ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹ ನಡುವೆ ಕೇಂದ್ರ ವರಿಷ್ಠರನ್ನು ಭೇಟಿಯಾದ ಹಿಮಂತ ಬಿಸ್ವಾ ಶರ್ಮಾ!

ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹಾಗಳ ನಡುವೆ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ

ನವದೆಹಲಿ: ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹಾಗಳ ನಡುವೆ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಮುಂದಿನ ಸರ್ಕಾರದ ನಾಯಕತ್ವ ಕುರಿತು ಚರ್ಚಿಸಲು ದೆಹಲಿಗೆ ಬರುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮತ್ತು ಆರೋಗ್ಯ ಸಚಿವ ಹಿಮಂತ ಶರ್ಮಾ ಅವರಿಗೆ ಶುಕ್ರವಾರ ಕೇಂದ್ರದ ವರಿಷ್ಠರಿಂದ ಬುಲಾವ್ ಬಂದಿತ್ತು. ಆದ್ದರಿಂದ ಅಸ್ಸಾಂನ ಉಭಯ ನಾಯಕರು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದರು. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನಿವಾಸದಲ್ಲಿ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ 
ಅವರನ್ನು ಶರ್ಮಾ ಭೇಟಿಯಾದರು ಎಂಬುದು ಮೂಲಗಳಿಂದ ತಿಳಿದುಬಂದಿದೆ. ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ
ಅವರನ್ನು ಭೇಟಿಯಾಗಿದ್ದಾರೆ.

ಸೊನೊವಾಲ್ ಕೂಡಾ ಬಿಜೆಪಿ ವರಿಷ್ಠರ ಜೊತೆಗೆ ಸಭೆಗಾಗಿ ಜೆ.ಪಿ. ನಡ್ಡಾ ಅವರ ನಿವಾಸಕ್ಕೆ ತೆರಳುವ ಸಾಧ್ಯತೆಯಿದೆ.ಅಲ್ಲಿ ಅಸ್ಸಾಂನ
ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ನಿರ್ಧಾರವಾಗಲಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆಯೇ ಎಂಬುದರ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.

2016ರ ವಿಧಾನಸಭಾ ಚುನಾವಣೆಯಲ್ಲಿ ಸೊನೊವಾಲ್ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಬಿಂಬಿಸಿತ್ತು, ನಂತರ
ಗೆದ್ದ ನಂತರ ಈಶಾನ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ರಚಿಸಿತ್ತು. ಈ ಬಾರಿ ಚುನಾವಣೆ ನಂತರ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುವುದಾಗಿ ಪಕ್ಷ ಹೇಳಿತ್ತು. 

126 ಸದಸ್ಯ ಬಲದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ,ಅದರ ಮೈತ್ರಿ ಪಕ್ಷ ಎಜಿಪಿ
9 ಹಾಗೂ ಯುಪಿಪಿಎಲ್ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com