ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಆ್ಯಂಟಿ-ಕೋವಿಡ್ ಔಷಧ (2-ಡಿಜಿ) ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ

ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಹಾನಿಯುನ್ನುಂಟು ಮಾಡುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಆ್ಯಂಟಿ-ಕೋವಿಡ್ ಔಷಧಿ(2-ಡಿಯೋಕ್ಸಿ-ಡಿ-ಗ್ಲೂಕೋಸ್)ಯ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮೋದನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಹಾನಿಯುನ್ನುಂಟು ಮಾಡುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಆ್ಯಂಟಿ-ಕೋವಿಡ್ ಔಷಧಿ (2-ಡಿಯೋಕ್ಸಿ-ಡಿ-ಗ್ಲೂಕೋಸ್)ಯ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿದೆ. 

ಹೈದರಾಬಾದ್‌ನ ಡಾ. ರೆಡ್ಡೀಸ್ ಪ್ರಯೋಗಾಲಯಗಳ ಸಹಯೋಗದೊಂದಿಗೆ ಡಿಆರ್‌ಡಿಒನ ಪ್ರಯೋಗಾಲಯದಲ್ಲಿ 2-ಡಿಯೋಕ್ಸಿ-ಡಿ-ಗ್ಲೂಕೋಸ್ (2-ಡಿಜಿ) ಔಷಧದ ಆ್ಯಂಟಿ ಕೋವಿಡ್ ಚಿಕಿತ್ಸಕವನ್ನು ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಮತ್ತು ಅಲೈಡ್ ಸೈನ್ಸಸ್ (INMAS) ಅಭಿವೃದ್ಧಿಪಡಿಸಿದೆ ಎಂದು ಡಿಆರ್‌ಡಿಒ ಹೇಳಿದೆ. 

ಕ್ಲಿನಿಕಲ್ ಪ್ರಯೋಗ ಫಲಿತಾಂಶಗಳು ಈ 2-ಡಿಜಿ ಔಷಧ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಆಮ್ಲಜನಕದ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. 2-ಡಿಜಿ ಯೊಂದಿಗೆ ಚಿಕಿತ್ಸೆ ಪಡೆದ ಹೆಚ್ಚಿನ ಕೋವಿಡ್ ರೋಗಿಗಳ ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬರುತ್ತಿದೆ. ಎರಡನೇ ಅಲೆ ತೀವ್ರ ಸ್ವರೂಪದಲ್ಲಿ ಕೋವಿಡ್-19ನಿಂದ ಬಳಲುತ್ತಿರುವ ಜನರಿಗೆ ಈ ಔಷಧವು ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಡಿಆರ್‌ಡಿಒ ಹೇಳಿದೆ.

2020ರ ಏಪ್ರಿಲ್ ಸಾಂಕ್ರಾಮಿಕ ರೋಗದ ಮೊದಲ ಅಲೆ ಶುರವಾದಾಗಲೇ ಐಎನ್‌ಎಂಎಎಸ್-ಡಿಆರ್‌ಡಿಒ ವಿಜ್ಞಾನಿಗಳು ಹೈದರಾಬಾದ್‌ನ ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯೂಲರ್ ಬಯಾಲಜಿ(ಸಿಸಿಎಂಬಿ) ಪ್ರಯೋಗಾಲಯದಲ್ಲಿ ಪ್ರಯೋಗಗಳನ್ನು ಶುರು ಮಾಡಿತ್ತು. ಈ ಔಷಧ ಎಸ್‌ಎಆರ್ಎಸ್-ಕೋವಿ-2 ವೈರಸ್ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ, ಜೊತೆಗೆ ಸೋಂಕನ್ನು ತಡೆಯುತ್ತದೆ ಎಂಬುದನ್ನು ಕಂಡುಹಿಡಿದಿದೆ ಎಂದು ಡಿಆರ್ ಡಿಒ ಹೇಳಿದೆ. 

ಈ ಫಲಿತಾಂಶಗಳ ಆಧಾರದ ಮೇಲೆ, ಡಿಸಿಜಿಐ-ಸಿಡಿಎಸ್ಕೊ ಕೋವಿಡ್ ರೋಗಿಗಳಲ್ಲಿ 2-ಡಿಜಿ 2ನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ಮೇ 2020ರಲ್ಲಿ ಅನುಮತಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com