ಕೇಂದ್ರಕ್ಕೆ 30 ಸಾವಿರ ಕೋಟಿ ರೂ. ಏನೂ ಅಲ್ಲ; ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Published: 08th May 2021 01:58 PM | Last Updated: 08th May 2021 02:04 PM | A+A A-

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೊಲ್ಕತ್ತಾ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎಲ್ಲಾ ನಾಗರಿಕರಿಗೆ ಉಚಿತ ಕೋವಿಡ್-19 ಲಸಿಕೆಗಾಗಿ ಮನವಿ ಮಾಡಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಮತಾ
ಬ್ಯಾನರ್ಜಿ ಪತ್ರ ಬರೆದಿದ್ದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಮಮತಾ ಬ್ಯಾನರ್ಜಿ, ಪಿಎಂ ಕೇರ್ ಫಂಡ್ ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದರು. ಹೊಸ ಪಾರ್ಲಿಮೆಂಟ್ ಮತ್ತು ಪ್ರತಿಮೆಗಳನ್ನು ನಿರ್ಮಿಸುತ್ತಿರುವಾಗ ಬಿಜೆಪಿ ಏಕೆ 30 ಸಾವಿರ ಕೋಟಿಯನ್ನು ಲಸಿಕೆಗಾಗಿ ಹಂಚಿಕೆ ಮಾಡಿಲ್ಲ ಎಂದು ಕೇಳಿದರು. 20 ಸಾವಿರ ವೆಚ್ಚ ಮಾಡಲಾಗಿದೆ. ಪಿಎಂ ಕೇರ್ಸ್ ಫಂಡ್ ಏಲ್ಲಿ ಎಂದು ಪ್ರಶ್ನಿಸಿದರು.
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಹಣ ವೆಚ್ಚ ಮಾಡಿರುವುದರ ವಿರುದ್ಧವೂ ವಾಗ್ದಾಳಿ ನಡೆಸಿದರು. ಬಿಜೆಪಿ ತನ್ನ
ನಾಯಕರು, ಸಚಿವರು, ಇತರ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಅನೇಕ ಹೋಟೆಲ್ ಗಳನ್ನು ಬುಕ್ ಮಾಡಿತ್ತು. ಅನೇಕ ಸಚಿವರು ಇಲ್ಲಿಯೇ ಉಳಿದಿದ್ದರು. ಹೋಟೆಲ್ ಮತ್ತು ವಿಮಾನಕ್ಕಾಗಿ ಎಷ್ಟು ಹಣ ಖರ್ಚು ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನೀರಿನಂತೆ ಹಣವನ್ನು ಹರಿಸಲಾಗಿದೆ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳಕ್ಕೆ ಲಸಿಕೆ ಖರೀದಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಅನುಮತಿ ನೀಡಲಿಲ್ಲ. ಇದೀಗ ಪಶ್ಚಿಮ ಬಂಗಾಳ ಆಕ್ಸಿಜನ್ ಕೊರತೆ ಸಮಸ್ಯೆ ಎದುರಿಸುತ್ತಿರುವುದಾಗಿ ಮಮತಾ ಬ್ಯಾನರ್ಜಿ ಹೇಳಿದರು.