ಕೋವಿಡ್-19 ಜವಾಬ್ದಾರಿ ನಿರ್ವಹಿಸುವಲ್ಲಿ ಮೋದಿ ಸರ್ಕಾರ ವಿಫಲ: ಸೋನಿಯಾ ಗಾಂಧಿ 

ಭಾರತವನ್ನು ಕಾಡುತ್ತಿರುವ ಮಾರಣಾಂತಿಕ ಕೋವಿಡ್ 19 ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜವಾಬ್ದಾರಿ ನಿರ್ವಹಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಭಾರತವನ್ನು ಕಾಡುತ್ತಿರುವ ಮಾರಣಾಂತಿಕ ಕೋವಿಡ್ 19 ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜವಾಬ್ದಾರಿ ನಿರ್ವಹಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

ವರ್ಚುವಲ್ ಮೂಲಕ ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆ ಉದ್ದೇಶಿಸಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏನು ಮಾಡುತ್ತಿದೆ? ಜನರ ನೋವು ನಿವಾರಿಸುವಲ್ಲಿ ಸೋತಿದ್ದು, ತನ್ನ ಮೂಲಭೂತ ಜವಾಬ್ದಾರಿ ಮತ್ತು ಕರ್ತವ್ಯದಿಂದ ಹೊರಗುಳಿದಿದೆ. ಕೂಡಲೇ ಕೇಂದ್ರ ಸರ್ಕಾರ ಸರ್ವಪಕ್ಷಗಳ  ಸಭೆ ಕರೆದು ಚರ್ಚೆ ನಡೆಸಬೇಕು" ಎಂದು ಆಗ್ರಹಿಸಿದ್ದಾರೆ.

ತಜ್ಞರ ಸಲಹೆಯನ್ನು ಸರ್ಕಾರ ನಿರ್ಲಕ್ಷಿಸಿದೆ. ಆಮ್ಲಜನಕ, ಔಷಧಿ ಮತ್ತು ವೆಂಟಿಲೇಟರ್‌ಗಳ ಪೂರೈಕೆ ಬಲಪಡಿಸುವಲ್ಲಿ ವಿಫಲವಾಗಿ‍ದೆ ಎಂದು ಆರೋಪಿಸಿದ ಸೋನಿಯಾ, 20 ಸಾವಿರ ಕೋಟಿ ರೂ.ಗಳ ಸೆಂಟ್ರಲ್ ವಿಸ್ಟಾ ಯೋಜನೆ ಉಲ್ಲೇಖಿಸಿ, ನಮ್ಮ ಜನರ ಅಗತ್ಯಗಳನ್ನು ಪೂರೈಸಲು ಲಸಿಕೆಗಳಿಗೆ ಸಾಕಷ್ಟು  ಆದೇಶಗಳನ್ನು ನೀಡಲು ಸರ್ಕಾರ ವಿಫಲವಾಗಿದೆ. ಬದಲಾಗಿ, ಜನರ ಯೋಗಕ್ಷೇಮಕ್ಕೆ ಯಾವುದೇ ಸಂಬಂಧವಿಲ್ಲದ ಅನಿವಾರ್ಯವಲ್ಲದ ಯೋಜನೆಗಳಿಗೆ ಸಾವಿರಾರು ಕೋಟಿಗಳನ್ನು ವೆಚ್ಚ ಮಾಡಲು ನಿರ್ಧರಿಸಿದೆ" ಎಂದರು.

ಬಿಜೆಪಿ ಆಡಳಿತವಿರುವ ಕೆಲ ಸರ್ಕಾರಗಳು ಸಹಾಯಕ್ಕಾಗಿ ಕೂಗಿದ ಜನರನ್ನು ಬಂಧಿಸಲು ದಮನಕಾರಿ ಶಕ್ತಿಯನ್ನು ಬಳಸುತ್ತಿವೆ. ಆಮ್ಲಜನಕದ ಕೊರತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಹೆಸರು ಹೇಳದೆ, ಅಲ್ಲಿ ನಡೆದ  ಘಟನೆಯನ್ನು ತಿಳಿಸಿದರು. ಈ ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ಯುವ ಕಾಂಗ್ರೆಸ್ ಸಹಾಯ ಹಸ್ತ ಚಾಚುವ ಪ್ರಯತ್ನವನ್ನು ಸೋನಿಯಾ ಗಾಂಧಿ ಶ್ಲಾಘಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com