ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 4.03 ಲಕ್ಷ ಹೊಸ ಕೇಸ್ ಪತ್ತೆ, 4,092 ಮಂದಿ ಸಾವು

ಭಾರತದಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 4,03,738 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,092 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 4,03,738 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,092 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಒಂದೇ ದಿನ 4,03,738 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 4,092 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,42,362ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,86,444 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,83,17,404ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 18,65,428 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  30,22,75,471 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 16,94,39,663 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com