ಕೋವಿಡ್-19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.17 ವರೆಗೂ ಲಾಕ್'ಡೌನ್ ವಿಸ್ತರಣೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಮೇ.17ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.
Published: 09th May 2021 01:35 PM | Last Updated: 09th May 2021 01:39 PM | A+A A-

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಮೇ.17ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಜ್ರಿವಾಲ್ ಅವರು, ಕಳೆದ 2-3 ದಿನಗಳಿಂದ ದೆಹಲಿಯಲ್ಲಿ ಕೋವಿಡ್ ಪಾಸಿಟಿವಿ ದರ ಶೇ.35% ದಿಂದ ಶೇ.23 ಇಳಿಕೆಯಾಗಿದೆ ಹಾಗೂ ಒಂದು ವಾರಗಳ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು ಈ ಅವಧಿಯಲ್ಲಿ ಮೆಟ್ರೋ ರೈಲಿನ ಸೇವೆಯೂ ಬಂದ್ ಇರುವುದಾಗಿ ಘೋಷಿಸಿದ್ದಾರೆ.
ಈ ಲಾಕ್ಡೌನ್ ಅವಧಿಯಲ್ಲಿ ನಾವು ವೈದ್ಯಕೂ ಮೂಲಸೌಕರ್ಯಗಳನ್ನು ಹೆಚ್ಚಳ ಮಾಡುತ್ತಿದ್ದೇವೆ. ಆಕ್ಸಿಜನ್ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಇದೀದ ದೆಹಲಿಯಲ್ಲಿ ಆಕ್ಸಿಜನ್ ಪರಿಸ್ಥಿತಿ ಸುಧಾರಿಸಿದೆ. ಆಸ್ಪತ್ರೆಗಳಿಗೆ ಬರುತ್ತಿರುವ ದೂರವಾಣಿ ಕರೆಗಳೂ ಕೂಡ ಕಡಿಮೆಯಾಗಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಲಸಿಕೆ ಅಭಿಯಾನ ಕುರಿತು ಮಾತನಾಡಿದ ಅವರು, ಶಾಲೆಗಳಲ್ಲಿ ಉತ್ತಮ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹೆಚ್ಚೆಚ್ಚು ಸಂಖ್ಯೆಯಲ್ಲಿ ಯುವಕರು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ನಮ್ಮಲ್ಲಿ ಇದೀಗ ಲಸಿಕೆಯ ಕೊರತೆಯಿದೆ ಆದರೆ, ಕೇಂದ್ರ ಸರ್ಕಾರ ಸಹಾಯ ಮಾಡುವ ಭರವಸೆ ಇದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಏಪ್ರಿಲ್ 20ರಿಂದಲೂ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಜಾರಿಯಿಂದ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಬಹುದಾಗಿದ್ದು, ಈ ಕಾರಣದಿಂದ ಮತ್ತೊಮ್ಮೆ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಮೇ3 ರಿಂದ 8 ವರೆಗೆ ದೆಹಲಿಯಲ್ಲಿ 1,15,285 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೆ ಅವಧಿಯಲ್ಲಿ 2105 ಜನರು ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಮತ್ತೊಂದು ಬಾರಿ ಲಾಕ್ ಡೌನ್ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.