ಕೋವಿಡ್-19: ಬಿಎಸ್ ವೈ ಸೇರಿ ನಾಲ್ಕು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ 

ಕರ್ನಾಟಕ, ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕರ್ನಾಟಕ, ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗವರ್ನರ್ ಗಳೊಂದಿಗೆ
ಪ್ರಧಾನಿ ಮೋದಿ ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದು, ಸಲಹೆಗಳನ್ನು ನೀಡುತ್ತಿದ್ದಾರೆ.

ಕೋವಿಡ್-19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಗೆ ಮಾಹಿತಿ ನೀಡುತ್ತಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,03,738 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. 4,092 ಸಾವು ಪ್ರಕರಣಗಳೊಂದಿಗೆ ಒಟ್ಟಾರೇ ಸಾವಿನ ಸಂಖ್ಯೆ 2,42,362 ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com