ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟಕ್ಕೆ 43 ಶಾಸಕರ ಸೇರ್ಪಡೆ, ಪ್ರತಿಜ್ಞಾ ವಿಧಿ ಸ್ವೀಕಾರ 

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ನೂತನ ಸರ್ಕಾರದಲ್ಲಿ ಸೋಮವಾರ 43 ಟಿಎಂಸಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Published: 10th May 2021 12:10 PM  |   Last Updated: 10th May 2021 12:10 PM   |  A+A-


TMC leaders sworn in as ministers in Mamata's Cabinet.

ಮಮತಾ ಬ್ಯಾನರ್ಜಿ ಸಂಪುಟಕ್ಕೆ ಸೇರ್ಪಡೆಗೊಂಡ ನೂತನ ಶಾಸಕರು

Posted By : Sumana Upadhyaya
Source : The New Indian Express

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ನೂತನ ಸರ್ಕಾರದಲ್ಲಿ ಸೋಮವಾರ 43 ಟಿಎಂಸಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೋಲ್ಕತ್ತಾದ ರಾಜಭವನದಲ್ಲಿ ಇಂದು ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಜಗ್ ದೀಪ್ ಧನ್ ಕರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಕಳೆದ ಬುಧವಾರ ಮುಖ್ಯಮಂತ್ರಿಯಾಗಿ ಸತತ ಮೂರನೇ ಬಾರಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕಳೆದ ತಿಂಗಳು ಮುಗಿದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 213 ಸೀಟುಗಳನ್ನು ಗೆದ್ದುಗೊಂಡಿದ್ದರೆ, ಭಾರತೀಯ ಜನತಾ ಪಾರ್ಟಿ 77 ಸ್ಥಾನಗಳನ್ನು ಪಡೆದಿತ್ತು. ಒಟ್ಟು 294 ಸ್ಥಾನಗಳನ್ನು ಪಶ್ಚಿಮ ಬಂಗಾಳ ವಿಧಾನಸಭೆ ಹೊಂದಿದೆ.

ಕೋವಿಡ್-10 ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮುರ್ಶಿದಾಬಾದ್ ನ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲಾಗಿತ್ತು.


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp