ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ಲಾಕ್ ಡೌನ್ ಹೇರಿಕೆ ಪರಿಗಣಿಸಲಿ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ತೀವ್ರಗೊಳ್ಳುತ್ತಿದ್ದು, ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸುವುದನ್ನು ಪರಿಗಣಿಸಬೇಕೆಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ತೀವ್ರಗೊಳ್ಳುತ್ತಿದ್ದು, ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸುವುದನ್ನು ಪರಿಗಣಿಸಬೇಕೆಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 

ಚಿತ್ತೋರ್ ಘರ್ ಹಾಗೂ ಶ್ರೀಗಂಗಾನಗರ್ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹರ್ಷವರ್ಧನ್ ಅವರೊಂದಿಗೆ ವರ್ಚ್ಯುಯಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿರುವ ಗೆಹ್ಲೋಟ್, " ಕೋವಿಡ್-19 ನಿಯಂತ್ರಣಕ್ಕಾಗಿ ಹಲವು ರಾಜ್ಯಗಳು ಈಗಾಗಲೇ ಲಾಕ್ ಡೌನ್ ನ್ನು ಘೋಷಿಸಿವೆ. ಆದರೆ ಅಂತಾರಾಜ್ಯ ಮಟ್ಟದಲ್ಲಿ ಸಮನ್ವಯದ ಕೊರತೆ ಇದೆ, ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ದೇಶವ್ಯಾಪಿ ಲಾಕ್ ಡೌನ್ ನ್ನು ಪರಿಗಣಿಸಬೇಕೆಂದು ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. 

ಮೇ.10-24 ವರೆಗೆ ರಾಜಸ್ಥಾನದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com