ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ 

ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರು ನೂತನ ಮುಖ್ಯಮಂತ್ರಿಗಳಿಗೆ ಅಧಿಕಾರ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಹಿಮಂತ ಬಿಸ್ವಾ ಶರ್ಮ
ಹಿಮಂತ ಬಿಸ್ವಾ ಶರ್ಮ

ಗುವಾಹಟಿ: ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರು ನೂತನ ಮುಖ್ಯಮಂತ್ರಿಗಳಿಗೆ ಅಧಿಕಾರ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ದೇವ್, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಮಣಿಪುರ ಸಿಎಂ ಎನ್. ಬಿರೆನ್ ಸಿಂಗ್ ಮತ್ತು ನಾಗಾಲ್ಯಾಂಡ್ ಸಿಎಂ ನೀಫಿಯು ರಿಯೊ ಹಾಗೂ ಇತರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಜೊತೆ ಸಂಪುಟ ಸದಸ್ಯರು ಕೂಡ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com