ಅನಂತ್ ನಾಗ್ ಎನ್ಕೌಂಟರ್: ಸೇನೆ ಗುಂಡಿಗೆ ಮೂವರು ಎಲ್ಇಟಿ ಉಗ್ರರು ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ​: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 

ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದ ವೈಲೂ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
 
ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. ಈ ವೇಳೆ ಮೂವರು ಉಗ್ರರು ಅಡಗಿಕುಳಿತಿರುವುದು ಖಚಿತವಾಗಿತ್ತು. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. 

ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com