ಈಗ ಆತಂಕ ಇಲ್ಲ, ಆದ್ದರಿಂದ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳೂ ಇಲ್ಲ: ಸರ್ಕಾರ

ವಲಸಿಗರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡುವ ಸಾಧ್ಯತೆಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಲಸಿಗರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡುವ ಸಾಧ್ಯತೆಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ. 

"ಈ ವರ್ಷ ಕಳೆದ ವರ್ಷದಂತೆ ದೇಶವ್ಯಾಪಿ ಲಾಕ್ ಡೌನ್ ಇಲ್ಲ, ಕಳೆದ ವರ್ಷದಂತೆ ಭಯ-ಭೀತಿಯ ಪರಿಸ್ಥಿತಿಯೂ ಇಲ್ಲ. ಆದ್ದರಿಂದ ಉಚಿತ ಆಹಾರ ಧಾನ್ಯಗಳ ವಿತರಣೆಯೂ ಅಗತ್ಯವಿಲ್ಲ" ಎಂದು ಹೇಳಿದೆ. 

ಆದರೆ ರೇಷನ್ ಕಾರ್ಡ್ ಹೊಂದಿರುವ 80 ಕೋಟಿ ಮಂದಿಗೆ ಮೇ-ಜೂನ್ ತಿಂಗಳಲ್ಲಿ,  ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಅಡಿಯಲ್ಲಿ  ಹೆಚ್ಚುವರಿ ಉಚಿತ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. 

ಪಿಎಂಜಿಕೆಎವೈ ನ ಅಡಿಯಲ್ಲಿ ಉಚಿತ ಧಾನ್ಯಗಳ ವಿತರಣೆಯ ಕಾರಣದಿಂದಾಗಿ ಆಹಾರ ಪದಾರ್ಥಗಳ ಬೆಲೆಯ ಮೇಲೆ ಯಾವುದೇ ಪರಿಣಾಮ ಇರುವುದಿಲ್ಲ ಎಂದು ಸರ್ಕಾರ ಇದೇ ವೇಳೆ ಸ್ಪಷ್ಟಪಡಿಸಿದೆ. 

ಕಳೆದ ವರ್ಷ ವಲಸಿಗರ ಬಿಕ್ಕಟ್ಟು ಬೃಹತ್ ಪ್ರಮಾಣದಲ್ಲಿದ್ದು, ಈಗ ರಾಷ್ಟ್ರವ್ಯಾಪಿ ಲಾಕ್ ಡೌನ್ ಇಲ್ಲ. ಸ್ಥಳೀಯ ಮಟ್ಟದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದ್ದರಿಂದ ಭಯದ ವಾತಾವರಣ ಇಲ್ಲ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೇ ವರ್ಚ್ಯುಯಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ತಮ್ಮ ಊರುಗಳಿಗೆ ವಾಪಸ್ಸಾಗಿರುವ ವಲಸಿಗರು ರೇಷನ್ ಕಾರ್ಡ್ ಗಳನ್ನು ಪಡೆದು ಉಚಿತ ಧಾನ್ಯಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ವಲಸಿಗರಿಗೆ ಸರ್ಕಾರ 6.40 ಲಕ್ಷ ಟನ್ ಗಳಷ್ಟು ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com