ಕೋವಿಡ್-19: ದೇಶದಲ್ಲಿ ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ದೇಶದಲ್ಲಿ ಒಟ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳು 37,04,099 ಕ್ಕೆ ಇಳಿದಿದ್ದು, 24 ಗಂಟೆಗಳ ಅವಧಿಯಲ್ಲಿ 11,122 ಪ್ರಕರಣಗಳು ಇಳಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಒಟ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳು 37,04,099 ಕ್ಕೆ ಇಳಿದಿದ್ದು, 24 ಗಂಟೆಗಳ ಅವಧಿಯಲ್ಲಿ 11,122 ಪ್ರಕರಣಗಳು ಇಳಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಪ್ರಮಾಣ ಈಗ ದೇಶದ ಒಟ್ಟು ಸೋಂಕುಗಳ ಶೇಕಡಾ 15.87 ರಷ್ಟಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ಗುಜರಾತ್, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಧ್ಯ ಪ್ರದೇಶದಲ್ಲಿ ಭಾರತದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.82.51 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಕೋವಿಡ್ ಪ್ರಕರಣಗಳು ಮತ್ತು 4,205 ಸಾವುಗಳು ವರದಿಯಾಗಿದ್ದು, ಸತತ ಎರಡನೇ ದಿನ ದೈನಂದಿನ ಪ್ರಕರಣಗಳಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಇದೇ ಅವಧಿಯಲ್ಲಿ 3,55,338 ಜನರು ಚೇತರಿಸಿಕೊಂಡಿದ್ದು, ದೇಶದಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 2,33,40,938 ಕ್ಕೆ ತಲುಪಿದೆ. ಈ ಪೈಕಿ 37,04,099 ಸಕ್ರಿಯ ಪ್ರಕರಣಗಳಾದರೆ, 2,54,197 ಸೋಂಕಿತರು ಈವರೆಗೆ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಇದುವರೆಗೆ 1,93,82,642 ಜನರು ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಸುಮಾರು 41,000 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಸಂಖ್ಯೆ ಕಳೆದ ಕೆಲವು ವಾರಗಳ ಸರಾಸರಿಗಿಂತ ಕಡಿಮೆ ಎನಿಸಿದೆ. ಕರ್ನಾಟಕ, ಕೇರಳದಲ್ಲಿ ತಲಾ 40,000 ಪ್ರಕರಣಗಳು ವರದಿಯಾಗುತ್ತಿವೆ.
 
ಮಂಗಳವಾರ ವರದಿಯಾದ 4,205 ಸಾವುಗಳ ಪೈಕಿ ಮಹಾರಾಷ್ಟ್ರದಲ್ಲಿ 800ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ನಂತರದ ಆರು ರಾಜ್ಯಗಳ ಪೈಕಿ  ಕರ್ನಾಟಕ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com