ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 13 ರೋಗಿಗಳು ಸಾವು; ನಾಲ್ಕು ದಿನದಲ್ಲಿ 70ಕ್ಕೂ ಹೆಚ್ಚು ಸಾವು
ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ ಹದಿಮೂರು ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published: 14th May 2021 03:47 PM | Last Updated: 14th May 2021 03:47 PM | A+A A-

ಸಾಂದರ್ಭಿಕ ಚಿತ್ರ
ಪಣಜಿ: ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ ಹದಿಮೂರು ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನದಲ್ಲಿ 75 ರೋಗಿಗಳು ಮೃತಪಟ್ಟಿದ್ದಾರೆ.
ಜಿಎಂಸಿಎಚ್ ಸಾವಿಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೋವಿಡ್ ಆಸ್ಪತ್ರೆಯ ಭಯಾನಕತೆ ಮುಂದುವರೆದಿದೆ.
ಜಿಎಂಸಿಎಚ್‌ನ ಇತ್ತೀಚಿನ ಸಾವುಗಳಿಗೆ ರಾಜ್ಯ ಸರ್ಕಾರ ನಿಖರವಾದ ಕಾರಣವನ್ನು ಬಹಿರಂಗಪಡಿಸದಿದ್ದರೂ, ರೋಗಿಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದ "ಲಾಜಿಸ್ಟಿಕ್ ಸಮಸ್ಯೆಗಳು" ಇವೆ ಎಂದು ಹೈಕೋರ್ಟ್‌ಗೆ ತಿಳಿಸಿದೆ.
ಜಿಎಂಸಿಎಚ್ ನಲ್ಲಿ ದಾಖಲಾಗಿದ್ದ 13 ಕೋವಿಡ್ ರೋಗಿಗಳು ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಕಳೆದ ನಾಲ್ಕು ದಿನಗಳಲ್ಲಿ ಆಸ್ಪತ್ರೆಯಲ್ಲಿ ರಾತ್ರಿ 2 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯ ಒಳಗೆ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.