ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಭಾರತದ ಮಾರುಕಟ್ಟೆಗೆ ಬಿಡುಗಡೆ, ಒಂದು ಡೋಸ್‌ಗೆ 995 ರೂ.

ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯನ್ನು ಶುಕ್ರವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದು, ಪ್ರತಿ ಡೋಸ್ ಗೆ ಜಿಎಸ್ ಟಿ ಸೇರಿದಂತೆ 995 ರೂಪಾಯಿ ನಿಗದಿಪಡಿಸಲಾಗಿದೆ.
ಸ್ಪುಟ್ನಿಕ್ ವಿ
ಸ್ಪುಟ್ನಿಕ್ ವಿ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯನ್ನು ಶುಕ್ರವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದು, ಪ್ರತಿ ಡೋಸ್ ಗೆ ಜಿಎಸ್ ಟಿ ಸೇರಿದಂತೆ 995 ರೂಪಾಯಿ ನಿಗದಿಪಡಿಸಲಾಗಿದೆ.

ಹೈದರಾಬಾದ್‌ನಲ್ಲಿ ಫಲಾನುಭವಿಗಳಿಗೆ ಮೊದಲ ಡೋಸ್ ನೀಡುವುದರೊಂದಿಗೆ ಕೋವಿಡ್ ಲಸಿಕೆ ಸ್ಪುಟ್ನಿಕ್ ವಿ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಔಷಧಿ ಉತ್ಪಾದಕ ಸಂಸ್ಥೆ ಡಾ. ರೆಡ್ಡಿಸ್ ಲ್ಯಾಬೊರೇಟರೀಸ್ ಶುಕ್ರವಾರ ತಿಳಿಸಿದೆ.

ಆಮದು ಮಾಡಿಕೊಂಡ ಲಸಿಕೆಯ ಪ್ರಸ್ತುತ ದರ 948 ರೂ.ಗೆ ನಿಗದಿಪಡಿಸಲಾಗಿದೆ, ಪ್ರತಿ ಡೋಸ್‌ಗೆ ಶೇಕಡಾ 5 ಜಿಎಸ್‌ಟಿ ಸೇರಿ ಪ್ರತಿ ಡೋಸ್‌ಗೆ 995.4 ರೂ. ನಿಗದಿಪಡಿಸಲಾಗಿದೆ ಎಂದು ಡಾ.ರೆಡ್ಡಿಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಪುಟ್ನಿಕ್ ವಿ ಲಸಿಕೆಯ ಮೊದಲ ಸರಕು ಮೇ 1 ರಂದು ಭಾರತಕ್ಕೆ ಬಂದಿಳಿದಿತ್ತು. ಮೇ 13 ರಂದು ಕೇಂದ್ರದ ಔಷಧ ಪ್ರಯೋಗಾಲಯದಿಂದ ನಿಯಂತ್ರಕ ಅನುಮತಿಯನ್ನು ಪಡೆಯಿತು ಎಂದು ರೆಡ್ಡೀಸ್ ಲ್ಯಾಬ್ ತಿಳಿಸಿದೆ.

ಮುಂಬರುವ ಕೆಲ ತಿಂಗಳುಗಳಲ್ಲಿ ಹೆಚ್ಚಿನ ಸರಕನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಬಳಿಕ, ಸ್ಪುಟ್ನಿಕ್ ವಿ ಲಸಿಕೆಯ ಭಾರತೀಯ ಉತ್ಪಾದನಾ ಪಾಲುದಾರರಿಂದ ಸರಬರಾಜು ಪ್ರಾರಂಭವಾಗಲಿದೆ ಎಂದು ಅದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com