ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹೆರಿಗೆ ಮಾಡಿಸಿದ್ದ ಸ್ತ್ರೀ ರೋಗ ತಜ್ಞೆ ಎಸ್.ಕೆ. ಭಂಡಾರಿ ಕೋವಿಡ್ ನಿಂದ ಸಾವು

ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಎಸ್.ಕೆ ಭಂಡಾರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಎಸ್.ಕೆ ಭಂಡಾರಿ
ಎಸ್.ಕೆ ಭಂಡಾರಿ

ನವದೆಹಲಿ: ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಎಸ್.ಕೆ ಭಂಡಾರಿ 
ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

86 ವರ್ಷದ ಡಾ. ಭಂಡಾರಿ ಕಾಂಗ್ರೆಸ್ ನಾಯಕರುಗಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆರಿಗೆ ಮಾಡಿಸಿದ್ದರು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಭಂಡಾರಿ ಎರಡು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೋನಾ ಪಾಸಿಟಿವ್ ಕೂಡ ಬಂದಿತ್ತು ಎಂದು ಸರ್ ಗಂಗಾ ರಾಮ್ ಆಸ್ಪತ್ರೆ ಅಧ್ಯಕ್ಷ ಡಾ. ಡಿಎಸ್ ರಾಣಾ ಹೇಳಿದ್ದಾರೆ. 

ಡಾ ಭಂಡಾರಿ ಅವರು ಕೋವಿಡ್ 19 ಎರಡು ಲಸಿಕೆ ತೆಗೆದುಕೊಂಡಿದ್ದರು ಎಂದು ಅವರು ತಿಳಿಸಿದ್ದಾರೆ, 

ಅವರ ಪತಿ ನಿವೃತ್ತ ಐಎಎಸ್ ಅಧಿಕಾರಿ ಕೂಡ ಕೋವಿಡ್ ಪಾಸಿಟಿವ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಇನ್ನೂ ಪತ್ನಿಯ ಸಾವಿನ ಸುದ್ದಿ ತಿಳಿಸಿಲ್ಲ ಎಂದು ಹೇಳಿದ್ದಾರೆ. ಡಾ. ಭಂಡಾರಿ ನಿಧನಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com