12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಿಬಿಎಸ್‌ಇ

ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಶುಕ್ರವಾರ ಹೇಳಿದೆ.

12 ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಸಂಬಂಧ ಮಂಡಳಿಯು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಿಬಿಎಸ್ ಇ ಸ್ಪಷ್ಟಪಡಿಸಿದೆ. 

ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಲಾಗುವುದು" ಎಂದು ಸಿಬಿಎಸ್‌ಇ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಗಳನ್ನು ಅನುಸರಿಸಿ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ ವರದಿಗಳ ಬಗ್ಗೆ ಸಿಬಿಎಸ್ ಇ ಅಧಿಕಾರಿ ಈ ಸ್ಪಷ್ಟನೆ ನೀಡಿದ್ದಾರೆ.

ಕೊರೋನಾ ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಏಪ್ರಿಲ್ 14 ರಂದು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com