ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ

ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ಎಲ್ಲರಿಗೂ ಈದ್ ಅಲ್ ಫಿತರ್ ಶುಭಾಶಯಗಳು. ಹಬ್ಬದ ಸಂದರ್ಭದಲ್ಲಿ ಎಲ್ಲರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

ನಮ್ಮ ಸಾಮೂಹಿಕ ಪ್ರಯತ್ನಗಳಿಂದ ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿವಾರಿಸಿ, ಮಾನವ ಕಲ್ಯಾಣವನ್ನು ಹೆಚ್ಚಿಸುವತ್ತ ಕೆಲಸ ಮಾಡೋಣ. ಎಲ್ಲರಿಗೂ ಈದ್ ಮುಬಾರಕ್! ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಡ್ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಶುಭಾಶಯ ಕೋರಿಸಿದರು. 

ಜನರು "ಮಾನವೀಯತೆಯ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಮತ್ತು ಅಗತ್ಯವಿರುವ ಜನರ ಸಹಾಯದ ಹಸ್ತ ಚಾಚಬೇಕು ಎಂದು ಕರೆ ನೀಡಿದ್ದಾರೆ. 

ಸರ್ಕಾರದ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಅನುಸರಿಸಿ ಕೊರೋನಾ ಸಾಂಕ್ರಾಮಿಕ ರೋಗವನ್ನು ನಿವಾರಿಸೋಣ. ಸಮಾಜ ಮತ್ತು ದೇಶದ ಕ್ಷೇಮಕ್ಕಾಗಿ ಕೆಲಸ ಮಾಡೋಣ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com