ಪಿಎಂ ಕಿಸಾನ್ ಯೋಜನೆ: 8ನೇ ಕಂತು ಇಂದು ಪ್ರಧಾನಿ ಮೋದಿಯಿಂದ ಬಿಡುಗಡೆ 

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣಕಾಸು ನೆರವಿನ 8ನೇ ಕಂತನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣಕಾಸು ನೆರವಿನ 8ನೇ ಕಂತನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿ 8ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ದೇಶದ 9.5 ಕೋಟಿಗೂ ಅಧಿಕ ಫಲಾನುಭವಿ ರೈತರಿಗೆ 19 ಸಾವಿರಕ್ಕೂ ಅಧಿಕ ಕೋಟಿ ಹಣವನ್ನು ವರ್ಗಾವಣೆ ಮಾಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇಂದು ಕೆಲವು ಫಲಾನುಭವಿ ರೈತರೊಂದಿಗೆ ಪ್ರಧಾನಿ ಮಾತನಾಡಲಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ.

ಏನಿದು ಪಿಎಂ ಕಿಸಾನ್ ಯೋಜನೆ?: ದೇಶದ ಬಡ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ ವರ್ಷಕ್ಕೆ 6 ಸಾವಿರ ರೂಪಾಯಿ ನೀಡುವುದಾಗಿದೆ. 4 ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಗಳಂತೆ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತದೆ.

ಈ ಯೋಜನೆಯಡಿ, ಇದುವರೆಗೆ ಕೇಂದ್ರ ಸರ್ಕಾರ 1.15 ಲಕ್ಷ ಕೋಟಿ ರೂಪಾಯಿಗಳನ್ನು ರೈತರ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com