ಪಿಎಂ ಕಿಸಾನ್ ಸಮ್ಮಾನ್ ನಿಧಿ: 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ 

ಅಕ್ಷಯ ತೃತೀಯದ ಶುಭ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂಕೆಎಸ್ ಎನ್ ವೈ) ಯಡಿ 8ನೇ ಕಂತನ್ನು ಬಿಡುಗಡೆ ಮಾಡಿದರು.
8ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ
8ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಅಕ್ಷಯ ತೃತೀಯದ ಶುಭ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(ಪಿಎಂಕೆಎಸ್ ಎನ್ ವೈ)ಯಡಿ 8ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

20 ಸಾವಿರ ಕೋಟಿಗೂ ಅಧಿಕ ಹಣವನ್ನು 8ನೇ ಕಂತಿನಲ್ಲಿ ಬಿಡುಗಡೆ ಮಾಡಿದ್ದು 9.5 ಕೋಟಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಈ ಮೂಲಕ 2021-22ನೇ ಆರ್ಥಿಕ ವರ್ಷದ ಮೊದಲ ಕಂತನ್ನು ಇಂದು ಬಿಡುಗಡೆ ಮಾಡಿದಂತಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ದೆಹಲಿಯ ತಮ್ಮ ಕಚೇರಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಿದ್ದಾರೆ. 

2019ರ ಡಿಸೆಂಬರ್ ನಲ್ಲಿ ಜಾರಿಗೆ ಬಂದ ಈ ಯೋಜನೆಯಿಂದ ಸರ್ಕಾರಕ್ಕೆ ವರ್ಷಕ್ಕೆ 75 ಸಾವಿರ ಕೋಟಿ ರೂಪಾಯಿ ವೆಚ್ಚ ತಗುಲುತ್ತದೆ. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್, ಪಶ್ಚಿಮ ಬಂಗಾಳದ 7 ಲಕ್ಷಕ್ಕೂ ಅಧಿಕ ರೈತರು ಈ ಯೋಜನೆಯ ಫಲಾನುಭವಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.

ಪ್ರಧಾನಿ ಮಾತು:ಕೋವಿಡ್-19ನ ಈ ಸಂಕಷ್ಟ ಸಮಯದಲ್ಲಿ ತೋಟಗಾರಿಕೆ ಮತ್ತು ಕೃಷಿ ಉತ್ಪಾದನೆಯಲ್ಲಿ ರೈತರು ದಾಖಲೆ ಮಾಡಿದ್ದಾರೆ. ಪ್ರತಿವರ್ಷ ರೈತರು ಬೆಳೆದ ಬೆಳೆಗಳನ್ನು ಖರೀದಿಸಿ ಸರ್ಕಾರ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಕನಿಷ್ಠ ಬೆಂಬಲ ಬೆಲೆಯಡಿ ಶೇಕಡಾ 10ರಷ್ಟು ಹೆಚ್ಚು ಗೋಧಿಯನ್ನು ಸಂಗ್ರಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com