ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ (ಆಮ್ಲಜನಕ ಸಾಂದ್ರಕ) ಸ್ಥಾಪಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ (ಆಮ್ಲಜನಕ ಸಾಂದ್ರಕ) ಸ್ಥಾಪಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ಟ್ವಿಟರ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಕೇಜ್ರಿವಾಲ್ ಅವರು, ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಉತ್ತೇಜನ ನೀಡಲು ದೆಹಲಿಯ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕುಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್  ಗಳಿಗೆ ಯಾರೇ ಕರೆ ಮಾಡಿದರೂ ಕೆಲವೇ ಗಂಟೆಗಳ ಅವಧಿಯಲ್ಲಿ ನಮ್ಮ ತಂಡ ನಿಮ್ಮನ್ನು ತಲುಪಿ ಆಕ್ಸಿಜನ್ ಕಾನ್ಸನ್ಟ್ರೇಟರ್ ನೀಡುತ್ತದೆ. ಅಲ್ಲದೆ ಇದೇ ತಂಡದೊಂದಿಗೆ ನುರಿತ ವೈದ್ಯರ ತಂಡ ಕೂಡ ಇರಲಿದ್ದು, ಇವರು ಸೋಂಕಿತರ ಮನೆಗೇ ತೆರಳಿ ರೋಗಿಗಳನ್ನು ಪರೀಕ್ಷಿಸುತ್ತಾರೆ. ಆಗ ರೋಗಿಗಳಿಗೆ ಆಮ್ಲಜನಕದ  ಅವಶ್ಯತೆ ಇದ್ದರೆ ಕೂಡಲೇ ಆಕ್ಸಿಜನ್ ಕಾನ್ಸನ್ಟ್ರೇಟರ್ ಮೂಲಕ ರೋಗಿಗೆ ಆಮ್ಲಜನಕದ ವ್ಯವಸ್ಥೆ ಮಾಡುತ್ತಾರೆ. ಅಲ್ಲದೆ ರೋಗಿಗೆ ಆಸ್ಪತ್ರೆಯ ಅವಶ್ಯಕತೆ ಇದ್ದರೆ ಕೂಡಲೇ ಅವರನ್ನು ಆಸ್ಪತ್ರೆ ರವಾನೆ ಮಾಡುತ್ತಾರೆ ಎಂದು ಹೇಳಿದರು.

ಅಂತೆಯೇ ತಮ್ಮ ಈ ಯೋಜನೆಗೆ ಓಲಾ ಫೌಂಡೇಶನ್, ಗಿವ್ ಇಂಡಿಯಾ ಸಾಥ್ ನೀಡುತ್ತಿದ್ದು, ಅವರ ನೆರವಿಗೆ ಧನ್ಯವಾದ ಹೇಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 

15 ದಿನಗಳಲ್ಲಿ 1000 ಐಸಿಯು ಹಾಸಿಗೆ; ವೈದ್ಯರಿಗೆ ಸಿಎಂ ಧನ್ಯವಾದ
ಇದೇ ವೇಳೆ ಕೇವಲ 15 ದಿನಗಳ ಅಂತರದಲ್ಲಿ 1000 ಐಸಿಯು ಹಾಸಿಗೆಗಳನ್ನು ಸಿದ್ಧಪಡಿಸಿದ ವೈದ್ಯರು ಮತ್ತು ಎಂಜಿನಿಯರ್‌ ಗಳಿದೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಇನ್ನು ಕಳೆದ 24 ಗಂಟೆಗಳಲ್ಲಿ ಅವಧಿಯಲ್ಲಿ ದೆಹಲಿಯಲ್ಲಿ 8,506 ಪ್ರಕರಣಗಳು ದಾಖಲಾಗಿದ್ದು, 289 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಪ್ರಸ್ತುತ 71,794 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 20,907ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com