ಪ್ರಧಾನಿ ಮೋದಿಯನ್ನು ಟೀಕಿಸುವ ಫೋಸ್ಟರ್ ಗಳು: 15 ಜನರ ಬಂಧನ, 17 ಎಫ್ ಐ ಆರ್ ದಾಖಲು

ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಪೋಸ್ಟರ್ ಗಳನ್ನು ದೆಹಲಿಯ ವಿವಿಧೆಡೆ ಅಂಟಿಸಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದು, 17 ಎಫ್ ಐಆರ್ ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಪೋಸ್ಟರ್ ಗಳನ್ನು ದೆಹಲಿಯ ವಿವಿಧೆಡೆ ಅಂಟಿಸಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದು, 17 ಎಫ್ ಐಆರ್ ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರೇ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ವಿದೇಶಗಳಿಗೆ ಕಳುಹಿಸಿದ್ದೀರಿ? ಎಂಬ ಬರಹವುಳ್ಳ ಫೋಸ್ಟರ್ ಗಳನ್ನು ನಗರದ ಹಲವು ಕಡೆಗಳಲ್ಲಿ ಅಂಟಿಸಲಾಗಿತ್ತು. ಈ ಫೋಸ್ಟರ್ ಗಳ ಬಗ್ಗೆ ಪೊಲೀಸರು ಮಾಹಿತಿ ಪಡೆದ ನಂತರ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಎಚ್ಚರಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 188( ಸಾರ್ವಜನಿಕ ಸೇವಕರಿಂದ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) ಆಸ್ತಿ ಅಪನಗದೀಕರಣ ಕಾಯ್ದೆಯ ಸೆಕ್ಷನ್ 3 ಸೇರಿದಂತೆ  ಇತರ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ 17 ಎಫ್ ಐಆರ್ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮತ್ತೆ ದೂರುಗಳನ್ನು ಸ್ವೀಕರಿಸಿದರೆ ಹೆಚ್ಚಿನ ಎಫ್ ಐಆರ್ ದಾಖಲಾಗುವ ಸಾಧ್ಯತೆಯಿದೆ. ನಗರದ ವಿವಿಧೆಡೆ ಹಾಕಲಾದ ಫೋಸ್ಟರ್  ಸಂಬಂಧ ಪ್ರಸ್ತುತ ತನಿಖೆ ನಡೆಯುತ್ತಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಮೂರು ಎಫ್ ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪಶ್ಚಿಮದಲ್ಲಿ ಮೂರು ಎಫ್ ಐಆರಾ ದಾಖಲಾಗಿದೆ. ಹೊರ ವಲಯದಲ್ಲಿ ಮೂರು ಎಫ್ ಐಆರ್ ದಾಖಲಾಗಿದೆ. ನಗರದ ಸೆಂಟ್ರಲ್ ಭಾಗದಲ್ಲಿ ಎರಡು ಎಫ್ ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ರೊಹಿಣಿಯಲ್ಲಿ ಎರಡು ಎಫ್ ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೂರ್ವದಲ್ಲಿ ಒಂದು ಎಫ್ ಐಆರ್ ದಾಖಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ. ದ್ವಾರಕದಲ್ಲಿ ಒಂದು ಎಫ್ ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಹದ್ರಾದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಈ ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸಲು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com