ಅಮೃತಸರ: ಆರು ಬಾರಿ ಸಂಸದರಾಗಿದ್ದ ಕಾಂಗ್ರೆಸ್ ನಾಯಕ ರಘುನಂದನ್ ಲಾಲ್ ಭಾಟಿಯಾ ನಿಧನ

ಹಿರಿಯ ಕಾಂಗ್ರೆಸ್‌ ನಾಯಕ, ಆರು ಬಾರಿ ಸಂಸದರಾಗಿದ್ದ ರಘುನಂದನ್‌ ಲಾಲ್‌ ಭಾಟಿಯಾ ಅವರು (100) ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. 
ರಘುನಂದನ್‌ ಲಾಲ್‌ ಭಾಟಿಯಾ
ರಘುನಂದನ್‌ ಲಾಲ್‌ ಭಾಟಿಯಾ

ಅಮೃತಸರ: ಹಿರಿಯ ಕಾಂಗ್ರೆಸ್‌ ನಾಯಕ, ಆರು ಬಾರಿ ಸಂಸದರಾಗಿದ್ದ ರಘುನಂದನ್‌ ಲಾಲ್‌ ಭಾಟಿಯಾ ಅವರು (100) ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. 

ಶುಕ್ರವಾರ ರಾತ್ರಿ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ರಘುನಂದನ್‌ ಅವರು ಕೊನೆ ಉಸಿರೆಳೆದಿದ್ದಾರೆ. ರಘುನಂದನ್‌ ಅವರು ಅಮೃತಸರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

1972ರಲ್ಲಿ ಮೊದಲ ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು. ಬಳಿಕ 1980, 1985, 1992, 1996 ಮತ್ತು 1999ರಲ್ಲೂ ಕಾಂಗ್ರೆಸ್‌ ‍‍ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

1992ರಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಅವರು, 2004ರಿಂದ 2008ರ ತನಕ ಕೇರಳ ಮತ್ತು 2008ರಿಂದ 2009ರ ತನಕ ಬಿಹಾರದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com