ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿ ಕೊರೋನಾಗೆ ಬಲಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿಯವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿಯವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಆಶಿಮ್ ಬ್ಯಾನರ್ಜಿಯವಕು ಕೋಲ್ಕತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ ಶುಕ್ರವಾರ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ 24 ಗಂಟೆಗಳಲ್ಲಿ ರಾಜ್ಯದಲ್ಲಿ 136 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 12,993ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com