ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 2.81 ಲಕ್ಷ ಹೊಸ ಕೇಸ್ ಪತ್ತೆ, 4,106 ಮಂದಿ ಸಾವು

ದೇಶದಲ್ಲಿ ಸೋಮವಾರ 2,81,386 ಕೊರೋನಾ ವೈರಸ್ ಪ್ರಕರಣ ದಾಖಲಾಗಿದ್ದು, ಇದು 26 ದಿನಗಳ ಕನಿಷ್ಠ ಎನಿಸಿಕೊಂಡಿದೆ. ಇದು ಸೋಂಕು ಇಳಿಕೆಯ ಸಂಕೇತ ಎಂದು ವಿಶ್ಲೇಷಿಸಲಾಗುತ್ತಿದೆ. ಆಧರೆ, ಸಾವಿನ ಸಂಖ್ಯೆ ಮಾತ್ರ ಇಳಿಯುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ 4,106 ಮಂದಿ ಸಾವನ್ನಪ್ಪಿದ್ದಾರೆ.

Published: 17th May 2021 09:44 AM  |   Last Updated: 17th May 2021 12:57 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ದೇಶದಲ್ಲಿ ಸೋಮವಾರ 2,81,386 ಕೊರೋನಾ ವೈರಸ್ ಪ್ರಕರಣ ದಾಖಲಾಗಿದ್ದು, ಇದು 26 ದಿನಗಳ ಕನಿಷ್ಠ ಎನಿಸಿಕೊಂಡಿದೆ. ಇದು ಸೋಂಕು ಇಳಿಕೆಯ ಸಂಕೇತ ಎಂದು ವಿಶ್ಲೇಷಿಸಲಾಗುತ್ತಿದೆ. ಆಧರೆ, ಸಾವಿನ ಸಂಖ್ಯೆ ಮಾತ್ರ ಇಳಿಯುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ 4,106 ಮಂದಿ ಸಾವನ್ನಪ್ಪಿದ್ದಾರೆ. 

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,74,390ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 35,16,997ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,78,741 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,11,74,076ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,73,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 31,64,23,658 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,29,26,460 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp